ಎಸ್.ಆರ್.ಎಸ್. ಕ್ರೀಡಾ ಮತ್ತು ಸಾಂಸ್ಕøತಿಕ ಉತ್ಸವ : ಚಾಲನೆ ನೀಡಿದ ಸಂಸದ ಗೋವಿಂದ ಕಾರಜೋಳ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 29 : ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳು ಅತಿ ಮುಖ್ಯವಾಗಿ ಬೇಕು. ಇದರಿಂದ ಮಾನಸಿಕ ಹಾಗೂ ದೈಹಿಕವಾಗಿ ಲವಲಿಕೆಯಿಂದಿರಲು ಸಾಧ್ಯ ಎಂದು ಮಾದಾರ ಚನ್ನಯ್ಯಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

 

ಎಸ್.ಆರ್.ಎಸ್.ಕಾಲೇಜಿನಲ್ಲಿ ಶುಕ್ರವಾರ ನಡೆದ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬರಪೀಡಿತ ಪ್ರದೇಶದಲ್ಲಿ ಎರಡು ಮೂರು ದಶಕಗಳ ಹಿಂದೆ ಮಠ ಮಾನ್ಯಗಳು ವಿದ್ಯಾಸಂಸ್ಥೆಯನ್ನು ಆರಂಭಿಸಿದವು. ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆ ವಿರಳವಾಗಿದ್ದ ಕಾಲದಲ್ಲಿ ಬಿ.ಎ.ಲಿಂಗಾರೆಡ್ಡಿರವರು ಎಸ್.ಆರ್.ಎಸ್. ಶಿಕ್ಷಣ ಸಂಸ್ಥೆಯನ್ನು ತೆರೆದು ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಲು ಆರಂಭಿಸಿದರು. ಇಲ್ಲಿ ನಡೆಯುತ್ತಿರುವ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಯನ್ನು ನೋಡಿದರೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿದೆಯೇನೋ ಅನ್ನಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ ಎತ್ತರೆತ್ತಕ್ಕೆ ಬೆಳೆಯಲಿ ಎಂದು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಶುಭ ಹಾರೈಸಿದರು.

ಸಂಸದ ಗೋವಿಂದಕಾರಜೋಳ ಮಾತನಾಡಿ ಎಸ್.ಆರ್.ಎಸ್. ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣವಿದೆ. ಪಠ್ಯೇತರ ಚಟುವಟಿಕೆ ಜೊತೆ ಮಕ್ಕಳು ಸಾಂಸ್ಕøತಿಕ ಹಾಗೂ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗುವುದರ ಜೊತೆಗೆ ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಸಹಕಾರಿಯಾಗಲಿದೆ ಎಂದರು.

ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‍ಕುಮಾರ್ ಬಂಡಾರು, ಎಸ್.ಆರ್.ಎಸ್. ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತ ಲಿಂಗಾರೆಡ್ಡಿ, ಅಮೋಘ, ಲಿಖಿತ ಅಮೋಘ, ಕರ್ನಾಟಕ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಮಧುಕರ್, ಪ್ರಾಂಶುಪಾಲರುಗಳಾದ ರವಿ ಟಿ.ಎಸ್. ನಂದನ್, ಸತೀಶ್‍ನಾಯ್ಕ, ಪ್ರಭಾಕರ್, ಅರ್ಪಿತ ಇವರುಗಳು ವೇದಿಕೆಯಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!