Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸಿಟಿ ಇನ್‍ಸ್ಟಿಟ್ಯೂಟ್ ಚುನಾವಣೆ : ನೂತನ ಕಾರ್ಯದರ್ಶಿಯಾಗಿ ವೆಂಕಟೇಶ್ ರೆಡ್ಡಿ ಆಯ್ಕೆ…!

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 01 : ನಗರದ ಸಿಟಿ ಇನ್‍ಸ್ಟಿಟ್ಯೂಟ್ ಆಡಳಿತ ಮಂಡಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ಎನ್.ಎಲ್.ವೆಂಕಟೇಶರೆಡ್ಡಿ, ಉಪಾಧ್ಯಕ್ಷರಾಗಿ ಟಿಎಸ್‍ಎನ್ ಜಯಣ್ಣ, ಖಜಾಂಚಿಯಾಗಿ ಅಜಿತ್ ಪ್ರಸಾದ್ ಜೈನ್ ಆಯ್ಕೆಯಾಗಿದ್ದು, 7 ಮಂದಿ ನಿರ್ದೇಶಕರು ಗೆಲುವು ಸಾಧಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಚುನಾವಣೆಯಲ್ಲಿ ಎರಡು ಗುಂಪುಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕಳೆದ ಆಡಳಿತ ಮಂಡಳಿಯಲ್ಲಿ ಕಾರ್ಯದರ್ಶಿಯಾಗಿದ್ದ ಚಿತ್ರಲಿಂಗಪ್ಪ ಅವರು ವೆಂಕಟೇಶರೆಡ್ಡಿ ಅವರ ಎದುರು 26 ಮತಗಳ ಅಂತರಿಂದ ಸೋಲು ಕಂಡರು.

ಕಳೆದ ಆಡಳಿತ ಮಂಡಳಿಯಲ್ಲಿ ಖಜಾಂಚಿಯಾಗಿದ್ದ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಳಿಯ ಅಜಿತ್ ಪ್ರಸಾದ್ ಜೈನ್ ಅವರು ಪರಮೇಶ್ವರಪ್ಪ ಹಾಗೂ ವಿಶ್ವನಾಥ್ ಅವರನ್ನು ಸೋಲಿಸಿ ಮರು ಆಯ್ಕೆಗೊಂಡರು.

ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿಎಸ್‍ಎನ್ ಜಯಣ್ಣ ಅವರು ಎಚ್.ಸಿ.ನಿರಂಜನಮೂರ್ತಿ ಅವರ ವಿರುದ್ಧ ಗೆಲುವು ಸಾಧಿಸಿದರು. ಚುನಾವಣಾಧಿಕಾರಿಯಾಗಿ ಜಿಲ್ಲಾ ಉಪ ವಿಭಾಗಾಧಿಕಾರಿ ಎಂ.ಕಾರ್ತಿಕ್ ಕಾರ್ಯನಿರ್ವಹಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment