ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 02 : ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಕನ್ನಡ ಹಬ್ಬದಲ್ಲಿ ಜಾನಪದ ಜಾಗೃತಿ ಪರಿಷತ್ ರಾಜ್ಯಾಧ್ಯಕ್ಷ ಚಿತ್ರದುರ್ಗದ ಹೆಚ್.ಪ್ಯಾರೆಜಾನ್‍ರವರಿಗೆ ಕನ್ನಡ ವಿಕಾಸ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೊಳಗೇರಿ ನಿವಾಸಿಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿರುವ ಇವರ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.
ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಸಂಸ್ಥಾಪಕ ಅಧ್ಯಕ್ಷೆ ಹೆಚ್.ಎಲ್.ಯಮುನಾ ಇನ್ನು ಅನೇಕರು ಚಿತ್ರದಲ್ಲಿದ್ದಾರೆ.