Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ |ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕೌಶಲ್ಯ ಆಧಾರಿತ ತರಬೇತಿ ಕೇಂದ್ರ ಸ್ಥಾಪನೆ : ಶಾಸಕ ಟಿ ರಘುಮೂರ್ತಿ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಚಳ್ಳಕೆರೆ: ಜಿಲ್ಲೆಯ ನಿರುದ್ಯೋಗಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ನಗರದ ಬಳ್ಳಾರಿ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಧ್ಯಾನಿಲಯದಲ್ಲಿ ವಿಟಿಯು ಹಾಗೂ ಕಾಲೇಜಿನ ಒಡಂಬಡಿಕೆಯಲ್ಲಿ ಕೌಶಲ್ಯ ಆಧಾರಿತ ಉದ್ಯೋಗ ತರಬೇತಿ ಕೇಂದ್ರವನ್ನು ಸ್ಥಾಪಿಸಲಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಇದು ಸಹಕಾರಿ ಯಾಗಲಿದೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.

ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಚಿತ್ರದುರ್ಗ ಚಳ್ಳಕೆರೆ ಮೊಳಕಾಲ್ಮೂರು ತಾಲೂಕುಗಳು ಬರಪೀಡಿತ ಪ್ರದೇಶವಾಗಿರುವುದರಿಂದ ಉದ್ಯೋಗ ಹರಸಿ ಯುವಜನತೆ ಬೆಂಗಳೂರು ಸೇರಿದಂತೆ ಇತರೆ ಮಹಾನಗರಗಳಿಗೆ ವಲಸೆ ಹೋಗುತ್ತಿದ್ದು ಇದನ್ನು ತಪ್ಪಿಸಿ ಕೌಶಲ್ಯ ಆಧಾರಿತ ತರಬೇತಿಯನ್ನು ನೀಡುವುದರ ಜೊತೆಗೆ ಪ್ರಮಾಣ ಪತ್ರವನ್ನು ನೀಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕುಗಳಲ್ಲಿ ಸಾಲ ಸೌಲಭ್ಯವನ್ನು ಕಲ್ಪಿಸುವ ಜವಾಬ್ದಾರಿಯನ್ನು ವಿಟಿಯು ವಿಶ್ವವಿದ್ಯಾನಿಲಯದ ಕೌಶಲ್ಯ ತರಬೇತಿ ಕೇಂದ್ರವು ನಿರ್ವಹಿಸುತ್ತದೆ ಇದರ ಸದುಪಯೋಗವನ್ನು ಜಿಲ್ಲೆಯ ಆಸಕ್ತ ನಿರುದ್ಯೋಗಸ್ಥರು ಬಳಸಿಕೊಂಡು ಉತ್ತಮ ಜೀವನ ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.

ವಿಟಿಯು ಕೌಶಲ್ಯ ತರಬೇತಿ ಕೇಂದ್ರದ ನಿರ್ದೇಶಕಿ ಮಾತನಾಡಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ದೇಶದ ಅತ್ಯುತ್ತಮ ವಿಶ್ವವಿದ್ಯಾನಿಲಯಗಳ ಪೈಕಿ ಮೂರನೇ ಸ್ಥಾನ ಪಡೆದಿದ್ದು ಇಂದು ಕೇವಲ ಶಿಕ್ಷಣ ಕಲಿಸುವ ವಿಶ್ವವಿದ್ಯಾನಿಲಯವಾಗಿರದೆ ಕೌಶಲ್ಯ ಆಧಾರಿತ ತರಬೇತಿ ನೀಡುವ ಕೇಂದ್ರವಾಗಿಯೂ ರೂಪಗೊಳ್ಳುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಯಕ್ರಮಗಳ ಅಡಿಯಲ್ಲಿ ಕಾರ್ಯನಿರ್ವಹಿಸಲಿದ್ದು ಸರ್ಕಾರದ ಅನುದಾನ ಪಡೆದು ಕೌಶಲ್ಯ ಆಧಾರಿತ ತರಬೇತಿಗಳನ್ನು ನೀಡಲಾಗುವುದು ಈಗಾಗಲೇ ವಿಶ್ವವಿದ್ಯಾನಿಲಯವು ಎಂಟು ಕೌಶಲ್ಯ ತರಬೇತಿ ಕೇಂದ್ರಗಳನ್ನು ರಾಜ್ಯದಲ್ಲಿ ಸ್ಥಾಪನೆ ಮಾಡಿದ್ದು 30 ಕಾಲೇಜುಗಳಲ್ಲಿ ಈಗಾಗಲೇ ಕಾರ್ಯವನ್ನು ಪ್ರಾರಂಭ ಮಾಡಿದೆ ಚಳ್ಳಕೆರೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೊಟ್ಟಮೊದಲ ಬಾರಿಗೆ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದ್ದು 18 ವಿವಿಧ ರೀತಿಯ ತರಬೇತಿಗಳನ್ನು ನೀಡಲಾಗುವುದು 45 ವಿದ್ಯಾರ್ಥಿಗಳಂತೆ ಒಂದು ತಂಡವನ್ನು ರಚಿಸಿ ತರಬೇತಿ ನೀಡಲಾಗುವುದು 18 ವರ್ಷ ಮೇಲ್ಪಟ್ಟವರು ಎಪ್ಪತ್ತು ವರ್ಷದೊಳಗಿನ ಕನಿಷ್ಠ ವಿದ್ಯಾರ್ಹತೆ 7ನೇ ತರಗತಿ ಅಥವಾ ಎಸ್ ಎಸ್ ಎಲ್ ಸಿ ಪಿಯುಸಿ ಪದವಿ ಹಂತದ ಉತ್ತೀರ್ಣ ಅಥವಾ ಅನುತ್ತೀರ್ಣ ವಿದ್ಯಾರ್ಥಿಗಳು ಈ ಕೌಶಲ್ಯ ತರಬೇತಿ ಪಡೆಯಬಹುದಾಗಿದ್ದು ಏಳು ದಿನಗಳ ಕಾಲ ತರಬೇತಿಯನ್ನು ನೀಡಿ ದಿನಕ್ಕೆ 500ರಂತೆ ತರಬೇತಿ ಭತ್ಯೆಯನ್ನು ನೀಡಲಾಗುವುದು ಅಲ್ಲದೆ 15,000 ಮೌಲ್ಯದ ತರಬೇತಿ ಉಪಕರಣಗಳ ಕಿಟ್ ವಿತರಿಸುವುದಲ್ಲದೆ ಬ್ಯಾಂಕುಗಳಲ್ಲಿ 5 ಲಕ್ಷದವರೆಗೆ ಸಾಲ ಸೌಲಭ್ಯ ದೊರಕಿಸುವ ಪ್ರಯತ್ನ ಮಾಡಲಾಗುವುದು ಈಗಾಗಲೇ ವಿಟಿಯು ಕೌಶಲ್ಯ ತರಬೇತಿ ಸಂಸ್ಥೆಯು ಕಾಲೇಜಿನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು 15 ದಿನಗಳ ಒಳಗಾಗಿ ತರಬೇತಿ ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಾ. ಸಂಧ್ಯಾ ಹಾಗೂ ಪ್ರಶಾಂತ್ ನಾಯಕ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಮಹಾಗುಣಪ್ಪ, ಶಿಕ್ಷಕರು ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment