ಹಾಸನ ಸಮಾವೇಶಕ್ಕೆ ತೆರಳುತ್ತಿದ್ದಾಗ ಕೆ.ಹೆಚ್ ಮುನಿಯಪ್ಪ ಕಾರು ಅಪಘಾತ : ಅಪಾಯದಿಂದ ಪಾರು..!

suddionenews
1 Min Read

ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಬೃಹತ್ ಸಮಾವೇಶ ನಡೆಯುತ್ತಿದೆ. ಸಿಎಂ, ಡಿಸಿಎಂ, ಸಚಿವರು, ಶಾಸಕರು, ಕಾರ್ಯಕರ್ತರೆಲ್ಲಾ ಈ ಸಮಾವೇಶದಲ್ಲಿ ನೆರೆದಿದ್ದಾರೆ. ಸಮಾವೇಶಕ್ಕೆಂದು ಹೋಗುತ್ತಿದ್ದಾಗ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣ ಅಪಾಯ ಸಂಭವಿಸಿಲ್ಲ.

ಸಚಿವ ಮುನಿಯಪ್ಪ ಅವರು ಶಾಂತಿಗ್ರಾಮ ರಸ್ತೆಯ ಮೂಲಜ ಹಾಸನಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಶುಲ್ಕ ವಸೂಲಿ ಕೇಂದ್ರದ ಬಳಿ ಹಿಂಬದಿಯಿಂದ ಬಂದ ಕಾರು ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಹೊಡೆತಕ್ಕೆ ಸಚುವರ ಕಾರು ಜಖಂ ಆಗಿದೆ. ಈ ಹಿನ್ನೆಲೆ ಆಹಾರ ಸಚಿವರು ಬೇರೆ ವಾಹನದಲ್ಲಿ ಹಾಸನದ ಸಮಾವೇಶ ತಲುಪಿದ್ದಾರೆ.

ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರವನ್ನು ಹಿಡಿದಿದೆ. ಈ ಬಾರಿಯ ಉಪಚುನಾವಣೆಯಲ್ಲೂ ಮೂರು ಕ್ಷೇತ್ರಗಳನ್ನು ತಮ್ಮದಾಗಿಸಿಕೊಂಡಿದೆ. ಈ ಕಾರಣದಿಂದ ಕಾಂಗ್ರೆಸ್ ತಮ್ಮ ಬಲ ಪ್ರದರ್ಶನ ಮಾಡುವುದಕ್ಕೆ ಹಾಸನದಲ್ಲಿ ಜನಕಲ್ಯಾಣ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಎಲ್ಲರೂ ಭಾಗಿಯಾಗಿದ್ದಾರೆ. ಈ ಸಮಾವೇಶದಲ್ಲಿ ಲಕ್ಷಾಂತರ ಜನರು ಕೂಡ ಸೇರಿದ್ದಾರೆ.

 

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ತಮ್ಮ ಸರ್ಕಾರದ ಗ್ಯಾರಂಟಿಗಳ ಯಶಸ್ಸುನ್ನು ಒತ್ತಿ ಒತ್ತಿ ಹೇಳಲಾಗಿದೆ. ವಿರೋಧ ಪಕ್ಷಗಳಿಗೆ ತಿರುಗೇಟನ್ನು ನೀಡಲಾಗಿದೆ. ಜೆಡಿಎಸ್ ಭದ್ರಕೋಟೆಯಲ್ಲಿಯೇ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕಾರು ಅಪಘಾತವಾದರೂ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವರು ಕೂಡ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *