Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2028 ಕ್ಕೆ ಅವಕಾಶ ಸಿಕ್ಕರೆ ಮುಖ್ಯಮಂತ್ರಿಯಾಗುತ್ತೇನೆ : ಸಚಿವ ಸತೀಶ್ ಜಾರಕಿಹೊಳಿ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 07 : ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶನಿವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬದಲಾವಣೆ ಸಂಬಂಧ ನಡೆಯುತ್ತಿರುವ ಚರ್ಚೆಗೂ ನನಗೂ ಸಂಬಂಧವಿಲ್ಲ. ಹೈಕಮಾಂಡ್‍ಗೆ ಬಿಟ್ಟ ವಿಚಾರ. ನಾನು ಸಚಿವನಾಗಿ ಕೆಲಸ ಮಾಡುತ್ತೇನೆ. 2028 ರ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕರೆ ಸಂತೋಷದಿಂದ ಸ್ವೀಕರಿಸುತ್ತೇನೆ. ಲೋಕೋಪಯೋಗಿ ಇಲಾಖೆಯಿಂದ ಎಲ್ಲಾ ಕಡೆ ರಸ್ತೆಗಳಾಗುತ್ತಿವೆ. ಮುಂದಿನ ದಿನಗಳಲ್ಲಿ ಎಲ್ಲವನ್ನು ಕಾದು ನೋಡಿ ಎಂದರು.

ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್‍ನವರು ಭ್ರಷ್ಟಾಚಾರ ನಡೆಸಿದ್ದಾರೆಂದು ಬಿಜೆಪಿಯವರು ಆಪಾದಿಸುತಿದ್ದಾರೆಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ ತಪ್ಪು ಯಾರೆ ಮಾಡಲಿ ಶಿಕ್ಷೆ ಅನುಭವಿಸಬೇಕಾಗುತ್ತದೆ. ಎಲ್ಲದಕ್ಕು ಬಿಜೆಪಿ.ಯವರು ರಾಜೀನಾಮೆ ಕೇಳುವುದರಲ್ಲಿ ಅರ್ಥವಿಲ್ಲ ಎಂದು ವಿರೋಧಿಗಳ ಟೀಕೆಗೆ ತಿರುಗೇಟು ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment