ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 08 : ನಿವೃತ್ತ ಎ.ಎಸ್.ಐ. ಕೆ.ಹೆಚ್.ಉಡುಸಾಲಪ್ಪ(75) ಭಾನುವಾರ ಬೆಳಗಿನ ಜಾವ ನಗರದ ಮುನ್ಸಿಪಲ್ ಕಾಲೋನಿಯಲ್ಲಿರುವ ನಿವಾಸದಲ್ಲಿ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಜೋಗಿಮಟ್ಟಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ಭಾನುವಾರ ನಡೆಯಿತೆಂದು ಕುಟುಂಬದವರು ತಿಳಿಸಿದ್ದಾರೆ.