ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 10 : ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಹಿರಿಯೂರು ವಿಭಾಗದ ಎಸಿಎಫ್ ಸುರೇಶ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಅವರಿಗೆ ಸೇರಿವೆ ಎನ್ನಲಾದ ಚಳ್ಳಕೆರೆಯಲ್ಲಿರುವ 2ಮನೆ ಮತ್ತು ಬೆಂಗಳೂರಿನಲ್ಲಿರುವ 1ಮನೆ ಮೇಲೆ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಪರಿಶೀಲನೆ ನಡೆಯುತ್ತಿದೆ.