Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಎಂ.ಕೃಷ್ಣ ನಿಧನ : ನಾಳೆ ರಾಜ್ಯಾದ್ಯಂತ ಶಾಲೆ-ಕಾಲೇಜು ರಜೆ

---Advertisement---

 

ಬೆಂಗಳೂರು: ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ರಾಜಕೀಯಕ್ಕೆ ಬಂದಾಗಿನಿಂದ ಹಲವು ಕ್ಷೇತ್ರಗಳಲ್ಲಿ ಸೇವೆಗಳನ್ನು ಸಲ್ಲಿಸಿದ್ದಾರೆ. ಜೊತೆಗೆ ಅವರು ನೀಡಿರುವ ಕೊಡುಗೆಯೂ ಅಪಾರವಾಗಿದೆ. ಅವರಿಗೆ ಗೌರವ ಪೂರ್ಣ ನಮನದೊಂದಿಗೆ ಬೀಳ್ಕೊಡುಗೆ ನೀಡುತ್ತಿದ್ದು, ಸರ್ಕಾರದಿಂದ ರಜೆ ಘೋಷಣೆ ಮಾಡಲಾಗಿದೆ.

ನಾಳೆ ಎಸ್.ಎಂ.ಕೃಷ್ಣ ಅವರ ಸ್ವಗ್ರಾಮ ಮಂಡ್ಯದ ಸೋಮನಹಳ್ಳಿಯಲ್ಲಿ ಜರುಗಲಿದೆ. ಕುಟುಂಬಸ್ಥರು, ಆಪ್ತರು, ರಾಜಕಾರಣಿಗಳು ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಮರಯಗುತ್ತಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವಾನ ಹೇಳುತ್ತಿದ್ದಾರೆ.

ಇದೀಗ ಸರ್ಕಾರದಿಂದ ಸರ್ಕಾರಿ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. ‘ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಶ್ರೀ.ಎಸ್.ಎಂ.ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ಮುಂದುವರೆದು ದಿವಂಗತರ ಅಂತ್ಯಕ್ರಿಯೆಯನ್ನು 2:11.12.20240 ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ದಿವಂಗತರ ಗೌರವಾರ್ಥವಾಗಿ ದಿನಾಂಕ: 11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ದಿನಾಂಕ:10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು’ ಎಂದು ಆದೇಶದಲ್ಲಿ ಹೊರಡಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...