ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 10 : ಒಂದು ಕಾಲದಲ್ಲಿ ನೀರಿಗೆ ಹಾಹಾಕಾರವಿದ್ದ ಚಿತ್ರದುರ್ಗದಲ್ಲಿ ಈಗ ಯಥೇಚ್ಚವಾಗಿ ನೀರು ಹರಿಯುತ್ತಿದೆ ಎಂದರೆ ಅದಕ್ಕೆ ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣರವರ ಕೊಡುಗೆ ಅಪಾರವೆಂದು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸ್ಮರಿಸಿದರು.
ಪ್ರವಾಸಿ ಮಂದಿರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಎಸ್.ಎಂ.ಕೃಷ್ಣರವರ ನಿಧನದಿಂದ ಅತೀವ ನೊವಾಗಿದೆ. ವಿದೇಶದಲ್ಲಿ ಶಿಕ್ಷಣ ಪಡೆದು ಹಿರಿಯ ಮುತ್ಸದಿ ರಾಜಕಾರಣಿಯಾಗಿದ್ದ ಎಸ್.ಎಂ.ಕೃಷ್ಣ ವಿಧಾನಸಭೆ, ವಿಧಾನಪರಿಷತ್, ರಾಜ್ಯಸಭೆ ಪ್ರವೇಶಿಸಿದ ಮಹಾನ್ ನಾಯಕ. ವಿದೇಶಾಂಗ ಸಚಿವರಾಗಿ
ರಾಜ್ಯಪಾಲರಾಗಿದ್ದ ಅವರು ಕೇಂದ್ರ ಕೈಗಾರಿಕಾ ಮಂತ್ರಿಯಾಗಿದ್ದಾಗ ಮೈಸೂರು, ಮಂಡ್ಯದಲ್ಲಿ ಕಾರ್ಖಾನೆ ಆರಂಭಿಸಿದರು. ಕೇಂದ್ರ ಹಣಕಾಸು ಸಚಿವರಾಗಿಯೂ ರಾಜಕಾರಣದಲ್ಲಿ ಅವಿರತ ಸೇವೆ ಸಲ್ಲಿಸಿದ್ದಾರೆಂದು ಗುಣಗಾನ ಮಾಡಿದರು.
1995 ರಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಪಕ್ಷಕ್ಕೆ ಶಕ್ತಿ ತುಂಬಿದರು. ಕಾಡುಗಳ್ಳ ವೀರಪ್ಪನ್ ಅಪಹರಣವಾದಾಗ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣರವರನ್ನು ದೆಹಲಿಯಲ್ಲಿ ಭೇಟಿಯಾಗಿ ಚಿತ್ರದುರ್ಗದಲ್ಲಿ ಕುಡಿಯುವ ನೀರಿಗೆ ಭೀಕರ ಸಮಸ್ಯೆಯಿದೆ ಎಂದು ಮನವರಿಕೆ ಮಾಡಿದಾಗ ಕ್ಯಾಬಿನೆಟ್‍ನಲ್ಲಿ 90 ಕೋಟಿ ರೂ.ಗಳನ್ನು ಮಂಜೂರು ಮಾಡಿದ ಫಲವಾಗಿ ದುರ್ಗದಲ್ಲಿ ನೀರಿನ ಸಮಸ್ಯೆ ಬಗೆಹರಿದಿದೆ. ರಾಜಕಾರಣಕ್ಕೆ ಬರುವ ಮುನ್ನ ಪ್ರೊಫೆಸರ್ ಆಗಿದ್ದರೆಂದು ಜಿ.ಹೆಚ್.ತಿಪ್ಪಾರೆಡ್ಡಿ ನೆನಪಿಸಿಕೊಂಡರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್