ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಒತ್ತಾಯ..!

suddionenews
1 Min Read

ಬೆಂಗಳೂರು: ಬೆಳಗಾವಿ ಅಧಿವೇಶನದ ನಡುವೆಯೇ ಪಂಚಮಸಾಲಿ ಸಮುದಾಯ ಬೃಹತ್ ಮಟ್ಟದಲ್ಲಿ ಪ್ರತಿಭಟನೆಯನ್ನು ನಡೆಸಿದೆ. ಸಾವಿರಾರು ಸಂಖ್ಯೆಯಲ್ಲಿ ಎಂಟ್ರಿ ಕೊಟ್ಟ ಪಂಚಮಸಾಲಿ ಸಮುದಾಯದವರು ಮೀಸಲಾತಿಗಾಗಿ ಪ್ರತಿಭಟನೆ ಮಾಡಿದರು. ಈ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ ಕೂಡ ನಡೆದಿದೆ. ಹಲವರನ್ನು ವಶಕ್ಕೂ ಪಡೆದುಕೊಂಡಿದ್ದಾರೆ. ಇದರಿಂದ ಪಂಚಮಸಾಲಿ ಸಮುದಾಯದವರು ಇನ್ನಷ್ಟು ರೊಚ್ಚಿಗೆದ್ದಿದ್ದಾರೆ. ಇದರ ನಡುವೆಯೇ ಹಿಂದುಳಿದ ಜಾತಿಗಳ ಒಕ್ಕೂಟವೊಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ. ಈ ಪತ್ರದಲ್ಲಿ ಮೀಸಲಾತಿ ನೀಡದಂತೆ ಒತ್ತಾಯಿಸಿದೆ.

 

ಹಿಂದುಳಿದ ಜಾತಿಗಳ ಒಕ್ಕೂಟ ಬರೆದ ಪತ್ರದಲ್ಲಿ, ‘ನಮ್ಮ ರಾಜ್ಯದಲ್ಲಿ 2002ರಿಂದ ಹಿಂದುಳಿದ ವರ್ಗಗಳನ್ನು ಪ್ರಚರ್ಗ-1, ಪ್ರವರ್ಗ-2, ಪ್ರವರ್ಗ-2A, ಪ್ರವರ್ಗ-2ಬಿ, ಪ್ರವರ್ಗ-3A, ಪ್ರವರ್ಗ-3ಬಿ ಎಂಬುದಾಗಿ ವಿಂಗಡಿಸಿ ಉದ್ಯೋಗ ಮತ್ತಯ ಶಿಕ್ಷಣದಲ್ಲಿ ಮೀಸಲಾತಿಯ ಶೇಕಡಾ 32 ರಷ್ಟು ಮೀಸಲಾತಿಯನ್ನು ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಲಾಗಿದೆ. 2002ರಿಂದ ಈವರೆಗೂ ಅದೇ ರೀತಿಯ ಮೀಸಲಾತಿಯನ್ನು ಹಿಂದುಳಿದ ವರ್ಗಗಳು ರಾಜ್ಯದಲ್ಲಿ ಪಡೆಯುತ್ತಿವೆ. ರಾಜ್ಯದಲ್ಲಿನ ಪಂಚಮಸಾಲಿ ಲಿಂಗಾಯತರು ಕೂಡ ಉಲ್ಲೇಕ-2ರ ಸರ್ಕಾರದ ಆದೇಶದ ಅನ್ವಯ ಪ್ರವರ್ಗ-3ಬಿ ಮೀಸಲಾತಿಯನ್ನು ಪಡೆಯುತ್ತಿದ್ದು, ಇತ್ತೀಚೆಗೆ ಈ ಸಮುದಾಯವನ್ನು ಶೇಕಡಾ 15ರಷ್ಟರ ಮೀಸಲಾತಿಯಡಿಯಲ್ಲಿ 2ಎ ಮೀಸಲಾತಿಗೆ ಸೇರಿಸಲು ಸರ್ಕಾರಕ್ಕೆ ಮನವಿ ಮಾಡಿ, ಒತ್ತಡ ಹಾಕುತ್ತಿದ್ದಾರೆ.

 

ಯಾವುದೇ ಕಾರಣಕ್ಕೂ ಲಿಂಗಾಯತ ಸಮುದಾಯವನ್ನು ಪ್ತವರ್ಗ-2ಎ ಮೀಸಲಾತಿಗೆ ಸೇರಿಸಬಾರದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟವೂ ಮನವಿ ಮಾಡಿದೆ. ಒಂದು ವೇಳೆ ಮೀಸಲಾತಿಗೆ ಸೇರಿಸಿದ್ದೆ ಆದರೆ ಹಿಂದುಳಿದ ಜಾತಿಗಳ ಒಕ್ಕೂಟ ರಾಜ್ಯದಲ್ಲಿ ಸರ್ಕಾರದ ವಿರುದ್ಧ ಉಗ್ರವಾದ ಹೋರಾಟ‌ ಮಾಡಲಿದೆ ಎಂದು ಎಚ್ಚರಿಕೆ ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *