Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಮಕೂರು ಜಿಲ್ಲೆಯ ಕೇಸಲ್ಲಿ ಇತಿಹಾಸವನ್ನೇ ಸೃಷ್ಟಿಸಿದ ಹೈಕೋರ್ಟ್ : ಕನ್ನಡಿಗರಿಂದ ಬಹುಪರಾಕ್

---Advertisement---

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಕನ್ನಡ ಭಾಷೆಯ ವಿಚಾರದಲ್ಲಿ ಇತಿಹಾಸ ಸೃಷ್ಟಿಸಿದೆ. ಇದೆ ಮೊದಲ ಬಾರಿಗೆ ಕನ್ನಡದಲ್ಲಿಯೇ ತೀರ್ಪು ನೀಡಿದೆ. ಭಾರತ ಭಾಷಾ ದಿನವಾದ ಇಂದು ಈ ಇತಿಹಾಸವನ್ನು ಸೃಷ್ಟಿ ಮಾಡಿದೆ. ನ್ಯಾಯಮೂರ್ತಿ ಎಂ.ದೀಕ್ಷಿತ್ ಮತ್ತು ಸಿ..ಎಂ.ಜೋಶಿ ಅವರು ವಿಭಾಗೀಯ ಪೀಠದಲ್ಲಿ ಕನ್ನಡದಲ್ಲಿಯೇ ತೀರ್ಪು ಪ್ರಕಟಿಸಲಾಗಿದೆ‌. ಈ ಮಹತ್ವದ ದಿ‌ನಕ್ಕೆ ಕನ್ನಡಿಗರ ಮನಸ್ಸು ಸಂತಸಗೊಂಡಿದೆ.

ಇನ್ನು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ನಂಜಾವಧೂತ ಸ್ವಾಮೀಜಿ ಅವರು ಸಲ್ಲಿಸಿದ್ದ ಮೂಲ ಮೇಲ್ಮನವಿಯನ್ನು ಪೀಠ ಪುರಸ್ಕರಿಸಿದೆ. ಈ ಪ್ರಕರಣದ ತೀರ್ಪನ್ನು ಪೀಠವೂ ಕ್ಙಡದಲ್ಲಿಯೇ ನೀಡಿದೆ. ಇಂಗ್ಲೀಷ್‌ನಲ್ಲಿ ಕೀಡ ತೀರ್ಪನ್ನು ಬರೆಯಲಾಗಿತ್ತು. ಆದರೆ ತೀರ್ಪಿನ ಆಪರೇಟಿವ್ ಭಾಗವನ್ನು ನ್ಯಾ.ಕೃಷ್ಣ ಎಸ್ ದೀಕ್ಷಿತ್ ಅವರು ಕನ್ನಡದಲ್ಲಿ ಓದಿದರು. ಬಳಿಕ ‘ಕನ್ನಡದ ಅವಸಾನ ಆಗಬಾರದು ಎನ್ನುವುದಾದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳಲ್ಲೂ ಕನ್ನಡದಲ್ಲಿ ವ್ಯವಹಾರ ನಡೆಯಬೇಕು’ ಎಂದು ಹೇಳಿದರು.

‘ನಿನ್ನೆ ಭಾರತ ಭಾಷಾ ದಿನವಾದ ಹಿನ್ನೆಲೆ ಇಂದು ಕನ್ನಡದಲ್ಲಿಯೇ ತೀರ್ಪು ನೀಡುತ್ತಿದ್ದೇವೆ. ಭಾರತದ ಭಾಷೆಗಳಿಗೆ ಮಾನ್ಯತೆ ನೀಡುವುದೇ ಈ ದಿನದ ಉದ್ದೇಶವಾಗಿದೆ. ಹೀಗಾ ಹೊಸ ಟ್ರೆಂಡ್ ಸೆಟ್ ಮಾಡಲು ನಾವೂ ನಿರ್ಧರಿಸಿದ್ದೇವೆ. ಸದ್ಯಕ್ಕೆ ಎಲ್ಲಾ ತೀರ್ಪನ್ನು ಇಂಗ್ಲಿಷ್ ನಲ್ಲಿಯೇ ನೀಡುತ್ತಿದ್ದೇವೆ. ಹೀಗೆ ಆದರೆ ಸಾಮಾನ್ಯ ಜನರಿಗೆ ಅರ್ಥವಾಗುವುದೇಗೆ. ಕನ್ನಡದಲ್ಲಿಯೇ ಕೊಡುವುದರಿಂದ ಸಾಮಾನ್ಯ ಜನರಿಗೆ ಅರ್ಥವಾಗುತ್ತದೆ. ಈ ತೀರ್ಪಿನಿಂದ ಬೇರೆ ನ್ಯಾಯಮೂರ್ತಿಗಳಿಗೂ ಉತ್ತಮ ಸಂದೇಶ ಸಿಕ್ಕಂತೆ ಆಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment