Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಹಾರ್ವೆಸ್ಟರ್ ವಾಹನ ಡಿಕ್ಕಿ : ಓರ್ವ ಸಾವು

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 13 : ಹಾರ್ವೆಸ್ಟರ್ (ಶೇಂಗಾ ಬಿಡಿಸುವ ಯಂತ್ರ) ವಾಹನ ಎಕ್ಸೆಲ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ಸೋಮನಾಥ ಎನ್ನುವ ವ್ಯಕ್ತಿ ಸ್ಥಳದಲ್ಲಿ ಮೃತ ಪಟ್ಟಿರುವ ಘಟನೆ ಶುಕ್ರವಾರ ಸಂಜೆ 6.30 ಸಮಯದಲ್ಲಿ ನಡೆದಿದೆ .

ಚಳ್ಳಕೆರೆ ತಾಲೂಕಿನ ಬೆಳಗೆರೆ ಹಾಗೂ ನಾರಾಯಣಪುರ ಗ್ರಾಮದ ಮಧ್ಯದಲ್ಲಿ ಈ ಘಟನೆ ನಡೆದಿದ್ದು. ಕೆ.ಟಿ ಹಳ್ಳಿ ಹಳ್ಳಿ ಗ್ರಾಮದ ಸೋಮನಾಥ (45 ) ವರ್ಷ ಹಲವು ವರ್ಷಗಳಿಂದ ಇವರ ಮಾವ ಮಂಜಣ್ಣ ಮನೆಯಲ್ಲಿ ವಾಸವಾಗಿದ್ದು ನಾರಾಯಣಪುರದಲ್ಲಿ ಮೋಟರ್ ಡಿವೈಂಗ್ ಮಾಡಿಕೊಂಡಿದ್ದು ಇಂದು ಸಂಜೆ ತನ್ನ ಎಕ್ಸೆಲ್ ದ್ವಿಚಕ್ರ ವಾಹನದಲ್ಲಿ ನಾರಾಯಣಪುರದಿಂದ ಬೆಳಗೆರೆ ಗ್ರಾಮಕ್ಕೆ ಬರುತ್ತಿರುವಾಗ ಶೇಂಗಾ ಬಿಡಿಸುವ ಯಂತ್ರದ ವಾಹನದ ಚಾಲಕ ಎಕ್ಸೆಲ್ ವಾಹನಕ್ಕೆ ಡಿಕ್ಕಿ ಪಡಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ವಿಷಯ ತಿಳಿದು ಬೆಳಗೆರೆ ಗ್ರಾಮದ ಯುವಕರು ವಾಹನವನ್ನು ಹಿಂಬಾಲಿಸಿ ಹೋಗಿ ಚಾಲಕನನ್ನು ಹಿಡಿದುಕೊಂಡು ಬಂದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಇನ್ಸ್ಪೆಕ್ಟರ್ ಆರ್ ಎಫ್ ದೇಸಾಯಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ .ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment