Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಕ್ಪ್ ಆಸ್ತಿ ಕಬಳಿಕೆ : ಬಿವೈ ವಿಜಯೇಂದ್ರರಿಂದ 150 ಕೋಟಿ ಆಮಿಷ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ? 

---Advertisement---

 

 

 

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಚರ್ಚೆಗೂ ಗ್ರಾಸವಾಗಿದೆ. ಇದೀಗ ಬಿವೈ ವಿಜಯೇಂದ್ರ ಅವರ ಮೇಲೆ ದೊಡ್ಡ ಆರೋಪವೊಂದು ಕೇಳಿ ಬಂದಿದೆ. ವಕ್ಫ್ ಸಂಬಂಧ 150 ಕೋಟಿ ಆಮಿಷ ನೀಡಿದ್ದರೆಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

 

ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದಿದ್ದಾರೆ. ಆ ಪತ್ರದಲ್ಲಿ ಹೀಗಿದೆ: ‘’ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು.

 

‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಕ್ಪ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ.

ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...