Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸಿದ್ದಾಪುರ ಗ್ರಾ. ಪಂ. ಅಧ್ಯಕ್ಷೆ ವಿರುದ್ದ ಅವಿಶ್ವಾಸಕ್ಕೆ ಹೈಕೋರ್ಟ್ ತಡೆ : ಬಾರೀ ಗದ್ದಲ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಮ್‍ಕಿನ್‍ಭಾನು ವಿರುದ್ದ ಪಂಚಾಯಿತಿಯಲ್ಲಿ ಬುಧವಾರ ಕರೆಯಲಾಗಿದ್ದ ಅವಿಶ್ವಾಸ ಗೊತ್ತುವಳಿ ಸಭೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಹದಿನೇಳು ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ದ ಸುಮಾರು ಎರಡು ಗಂಟೆಗಳ ಕಾಲ ಮಾತಿನ ವಾಗ್ವಾದ ನಡೆದು ಕೊನೆಗೆ ಅವಿಶ್ವಾಸ ಗೊತ್ತುವಳಿ ಸಭೆಯನ್ನು ರದ್ದುಪಡಿಸಲಾಯಿತು.

ಅಧ್ಯಕ್ಷೆ ವಿರುದ್ದ ಹದಿನೇಳು ಸದಸ್ಯರು ಅವಿಶ್ವಾಸ ಗೊತ್ತುವಳಿ ಅರ್ಜಿಯನ್ನು ಉಪ ವಿಭಾಗಾಧಿಕಾರಿ ಕಚೇರಿಗೆ ನವೆಂಬರ್‍ನಲ್ಲಿ ಸಲ್ಲಿಸಿದ್ದರು. ನಿಯಮದ ಪ್ರಕಾರ ಅರ್ಜಿ ನೀಡಿ ಹದಿನೈದು ದಿನದ ಬಳಿಕ ಅವಿಶ್ವಾಸ ಗೊತ್ತುವಳಿ ಸಭೆಗೆ ಹಾಜರಾಗುವಂತೆ ನೋಟಿಸ್ ಕೊಡಬೇಕು. ಆದರೆ ಉಪ ವಿಭಾಗಾಧಿಕಾರಿ ಕಚೇರಿಯಿಂದ ಒಂದು ದಿನ ಮುಂಚಿತವಾಗಿ ಸದಸ್ಯರುಗಳಿಗೆ ನೋಟಿಸ್ ನೀಡಿರುವ ತಪ್ಪನ್ನು ಹಿಡಿದು ಅಧ್ಯಕ್ಷೆ ತಮ್‍ಕಿನ್‍ಭಾನು ಹೈಕೋರ್ಟ್ ಮೊರೆ ಹೋಗಿದ್ದರಿಂದ ಅವಿಶ್ವಾಸ ಗೊತ್ತುವಳಿಗೆ ತಡೆಯಾಜ್ಞೆ ನೀಡಿದೆ.

ಅಧ್ಯಕ್ಷೆ ವಿರುದ್ದ ಕೈ ಎತ್ತುವ ಮೂಲಕ ಅವಿಶ್ವಾಸ ಮಂಡಿಸುತ್ತೇವೆಂದು ಹದಿನೇಳು ಸದಸ್ಯರುಗಳು ಸಿದ್ದಾಪುರ ಗ್ರಾಮ ಪಂಚಾಯಿತಿಯಲ್ಲಿ ಪಟ್ಟು ಹಿಡಿದು ಕುಳಿತಾಗ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಅವಿಶ್ವಾಸ ಗೊತ್ತುವಳಿಗೆ ಅವಕಾಶ ಕೊಡಲು ಬರುವುದಿಲ್ಲವೆಂದು ಚುನಾವಣಾಧಿಕಾರಿಗಳು ಸದಸ್ಯರುಗಳಿಗೆ ಮನವರಿಕೆ ಮಾಡಿಕೊಟ್ಟರು. ಒಪ್ಪದ ಸದಸ್ಯರುಗಳು ಒಂದು ದಿನ ಮುಂಚೆ ನೋಟಿಸ್ ನೀಡಿ ಎಡವಟ್ಟು ಮಾಡಿರುವ ಅಧಿಕಾರಿಗಳ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಪಟ್ಟು ಹಿಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೈ.ರವಿಕುಮಾರ್, ಪಿ.ಡಿ.ಓ. ದೀಪ ಹಾಗೂ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೋರ್ವರು ಈ ಸಂದರ್ಭದಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment