Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು : ಮುಖ್ಯಮಂತ್ರಿ ಸಿದ್ದರಾಮಯ್ಯ

Facebook
Twitter
Telegram
WhatsApp

 

ಮಂಡ್ಯ, ಡಿಸೆಂಬರ್ 20: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಅವರು ಇಂದು ಸಿ.ಟಿ.ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಪದಬಳಕೆಯಾಗಿರುವುದು ಸತ್ಯ :

ಸಭಾಪತಿ ಬಸವರಾಜ ಹೊರಟ್ಟಿಯವರು , ಸಿಟಿ ರವಿಯವರು ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು , ಪದಬಳಕೆಯಾಗಿರುವುದು ಸತ್ಯ ಎಂದರು.

ಕಾನೂನಿನ ಕ್ರಮ ಜರುಗಿಸಲೇಬೇಕಾಗುತ್ತದೆ :

ಸಿಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೈಲಿಂದ ರಿಲೀಸ್ ಆದ್ಮೇಲೆ ಸಿಟಿ ರವಿ ಸುದ್ದಿಗೋಷ್ಟಿ : ಪೊಲೀಸರ ಬಗ್ಗೆ ಹೇಳಿದ್ದೇನು..?

ದಾವಣಗೆರೆ: ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಕೆಟ್ಟ ಪದ ಬಳಕೆ ಮಾಡಿದ್ದರು ಎಂಬ ಕಾರಣದಿಂದ ಬಿಜೆಪಿ ಎಂಎಲ್ಸಿ ಸಿಟಿ ರವಿ ಅರೆಸ್ಟ್ ಆಗಿದ್ದರು. ಬೆಳಗಾವಿ ನ್ಯಾಯಾಲಯ ಜಾಮೀನು ಅರ್ಜಿ ಕ್ಯಾನ್ಸಲ್ ಮಾಡಿ ಬೆಂಗಳೂರು ಕಾರಾಗೃಹಕ್ಕೆ ಶಿಫ್ಟ್

ನಾಲ್ಕು ದಿನದಿಂದ ಚಿನ್ನದ ದರ ಇಳಿಕೆ..!

ಬೆಂಗಳೂರು: ಚಿನ್ನ ಬೆಳ್ಳಿ ಬೆಲೆಯಲ್ಲಿ ನಿರೀಕ್ಷೆಯಂತೆ ಡಿಸೆಂಬರ್ ತಿಂಗಳಲ್ಲಿ ಇಳಿಕೆಯಾಗುತ್ತಿದೆ‌. ದಿನೇ ದಿನೇ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ನಿನ್ನೆಯೂ ಇಳಿಕೆಯಾಗಿದ್ದ ಚಿನ್ನ ಇಂದು ಕೂಡ ಇಳಿಕೆಯಾಗಿದೆ. ಸುಮಾರು 40 ರೂಪಾಯಿ ಅಷ್ಟು ಇಳಿಕೆಯಾಗಿದೆ. ಒಂದು

ಕಾಂಗ್ರೆಸ್ ಗೂಂಡಾಗಳು ಸಿಟಿ ರವಿ ಮೇಲೆ ಹಲ್ಲೆ‌ ಮಾಡೋಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ : ವಿಜಯೇಂದ್ರ..!

ಬೆಳಗಾವಿ: ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರ ಬಂಧನವನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರೆಸ್ಸಿನ ಗೂಂಡಾಗಳು ಸುವರ್ಣ

error: Content is protected !!