Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ವ್ಯವಸ್ಥಿತವಾಗಿ ನಡೆಸಲು ಕ್ರಮ: ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು, ಡಿ.21: ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಶನಿವಾರ ಕೃಷ್ಣಾದಲ್ಲಿ ಶತಮಾನೋತ್ಸವ ಆಚರಣೆ ಸಂಬಂಧವಾಗಿ ರಚಿಸಲಾಗಿರುವ ಸಚಿವರು ಹಾಗೂ ಸಂಸತ್‌ ಸದಸ್ಯರನ್ನು ಒಳಗೊಂಡ ವಿವಿಧ ಸಮಿತಿಗಳು ಕೈಗೊಂಡ ಸಿದ್ದತೆಗಳ ಪರಿಶೀಲನೆ ನಡೆಸಿದರು.

ಬೆಳಗಾವಿಯಲ್ಲಿ ಎರಡು ದಿನಗಳ ಕಾರ್ಯಕ್ರಮಗಳ ಮೂಲಕ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಪ್ರಥಮ ದಿನ ಡಿಸೆಂಬರ್ 26ರಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದ್ದು, 27ರಂದು ಸಾರ್ವಜನಿಕ ಸಮಾರಂಭ ನಡೆಯಲಿದೆ.

ಶತಮಾನೋತ್ಸವ ಸಮಾರಂಭಕ್ಕೆ ರಾಷ್ಟ್ರದೆಲ್ಲೆಡೆಯಿಂದ ಆಗಮಿಸಲಿರುವ ಸಂಸದರು, ಗಣ್ಯರಿಗೆ ವಸತಿ, ಊಟೋಪಚಾರ ಸೇರಿದಂತೆ ಸೂಕ್ತ ಆತಿಥ್ಯ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಸಮಿತಿಗಳಿಗೆ ಸೂಚಿಸಲಾಯಿತು.

ಡಿಸೆಂಬರ್ 27ರಂದು ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ ನೆರವೇರಿಸುವ ಕುರಿತು ನಿರ್ಧರಿಸಲಾಯಿತು ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಬಗ್ಗೆ ನಿರ್ಧರಿಸಲಾಯಿತು

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಡನ್ನು ಪ್ರಥಮ ಬಾರಿಗೆ ಗಂಗೂಬಾಯಿ ಹಾನಗಲ್ ಅವರು ಹಾಡಿದ್ದರು. ಈಗ ಅದಕ್ಕೂ ನೂರು ವರ್ಷಗಳು ಸಂದ ಹಿನ್ನೆಲೆಯಲ್ಲಿ ಆ ಹಾಡನ್ನು ಪುನಃ ಶತಮಾನೋತ್ಸವ ಆಚರಣೆ ಯಲ್ಲಿ ಹಾಡಿಸುವ ಕುರಿತು ತೀರ್ಮಾನಿಸಲಾಯಿತು.

ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಏಕೀಕರಣದ ಮೊದಲ ಧ್ವನಿ ಬಲವಾಗಿ ಪ್ರತಿಪಾದಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶ ಕನ್ನಡಿಗರ ಪಾಲಿಗೂ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಚಿವರಾದ ಪರಮೇಶ್ವರ್, ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಬೋಸರಾಜು, ಡಾ. ಎಂ ಸಿ ಸುಧಾಕರ್, ರಹೀಂಖಾನ್‌, ಪ್ರಿಯಾಂಕ ಖರ್ಗೆ, ಶಿವರಾಜ ತಂಗಡಗಿ, ಮಧು ಬಂಗಾರಪ್ಪ ಸೇರಿದಂತೆ ಸಂಸತ್ ಸದಸ್ಯರು, ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಟಿ.ರವಿ ಮಾತು ಕ್ರಿಮಿನಲ್ ಅಪರಾಧ : ಸಿಎಂ ಸಿದ್ದರಾಮಯ್ಯ

ಕಲಬುರಗಿ, ಡಿ. 22: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ

ವಿಶೇಷ ವರದಿ : ಮೂರನೇ ಬಾರಿಗೆ ಕೋಡಿ ಬೀಳಲಿರುವ ವಿವಿಸಾಗರ : ಕಣ್ತುಂಬಿಕೊಳ್ಳಲು ಕಾಯುತ್ತಿರುವ ಜನಸಾಗರ

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 22 : ಜಿಲ್ಲೆಯ ಏಕೈಕ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಮತ್ತೊಮ್ಮೆ ಮೈದುಂಬಿ ಕೋಡಿಬೀಳಲು ದಿನಗಣನೆ ಆರಂಭವಾಗಿದ್ದು, ಇನ್ನು ಒಂದು ಅಡಿಗಿಂತಲೂ ಕಡಿಮೆ ನೀರು ಬರಬೇಕಿದೆ. ಬಹುತೇಕ ಜನವರಿ

ಹುರುಳಿಕಾಳು : ಆರೋಗ್ಯ ಪ್ರಯೋಜನಗಳು

  ಸುದ್ದಿಒನ್ : ಹುರುಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ತೂಕ ನಷ್ಟವಾಗುತ್ತದೆ. ಮೆಂತ್ಯದಲ್ಲಿರುವ ಫೈಬರ್ ಹೃದಯದ ಆರೋಗ್ಯಕ್ಕೆ ಒಳ್ಳೆಯದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

error: Content is protected !!