Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಜಿಲ್ಲಾ ಬೇಡ ಜಂಗಮ ಸಮಾಜದ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ , ಡಿ. 22 : ಜಿಲ್ಲಾ ಬೇಡ ಜಂಗಮ ಸಮಾಜ ಸಂಸ್ಥೆ ವತಿಯಿಂದ 2025ನೇ ಸಾಲಿನ ದಿನದರ್ಶಿಕೆಯನ್ನು ಇಂದು ಚಿತ್ರದುರ್ಗದ ಶ್ರೀ ಚಿನ್ಮೂಲಾದ್ರಿ ಬೃಹನ್ಮಠದ ತ್ರಿವಿಧ ದಾಸೋಹ ತತ್ವದ ರೂವಾರಿ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳ 150ನೇ ಜಯಂತೋತ್ಸವ ಶುಭ ಸಂದರ್ಭದಲ್ಲಿ ಚಿತ್ರದುರ್ಗದ ಮೆದೇಹಳ್ಳಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಬ್ರಿಡ್ಜ್ ಸೇತುವೆಯ ಹತ್ತಿರ ಶ್ರೀ ಜಗದ್ಗುರು ಜಯದೇವ ವೃತ್ತ ಮತ್ತು ನಾಮಫಲಕ ಉದ್ಘಾಟನಾ ಸಮಾರಂಭದಲ್ಲಿ ಹೆಬ್ಬಾಳ್‍ನ ವಿರಕ್ತ ಮಠದ ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳು ಬಿಡುಗಡೆಗೂಳಿಸಿದರು.

ಈ ಸಂದರ್ಭದಲ್ಲಿ ಬಾಪೂಜಿ ಸಮೂಹ ಸಂಸ್ಥೆಗಳು ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಕೆ. ಎಂ. ವೀರೇಶ್, ನಗರಸಭೆಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷರಾದ ಸಮಾಜದ ಸಂಘಟನಾ ಕಾರ್ಯದರ್ಶಿ ಕೆ. ಬಿ. ಸುರೇಶ್, ಅ.ಭಾ.ವೀ. ಮಹಾ ಸಭಾದ ಅಧ್ಯಕ್ಷರಾದ ಮಹಡಿ ಶಿವಮೂರ್ತಿ, ಜಿಲ್ಲಾ ಬೇಡ ಜಂಗಮ ಸಮಾಜದ ಪ್ರಧಾನ ಕಾರ್ಯದರ್ಶಿ ಷಡಾಕ್ಷರಯ್ಯ, ಸಹ ಕಾರ್ಯದರ್ಶಿ ಶರಣಯ್ಯ, ರಂಗ ಕಲಾವಿದ ಗಣೇಶಯ್ಯ, ರಾಜೇಶ್, ಜಾಲಿಕಟ್ಟೆ ರುದ್ರಣ್ಣ, ರುದ್ರೇಶ್ ಐಗಳ್ ಶಿಕ್ಷಕರಾದ ಚನ್ನಯ್ಯ ನಿವೃತ್ತ ಪ್ರಚಾರ್ಯರು ಮುರುಗೇಂದ್ರಯ್ಯ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...