ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 23: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಓರ್ವ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಐಮಂಗಲ ಬಳಿ ನಡೆದಿದೆ.
ಚಿತ್ರದುರ್ಗದ ಜಿ.ಸಿ. ಹೊಯ್ಸಳ, (28 ವರ್ಷ) ಮೃತ ವ್ಯಕ್ತಿ. ಇವರು ಚಿತ್ರದುರ್ಗದಿಂದ ಬೆಂಗಳೂರಿಗೆ ಹೊರಟಿದ್ದರು ಎನ್ನಲಾಗಿದೆ. ಐಮಂಗಲ ಬಳಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.