Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರು ಸಹ ಸರ್ಕಾರದ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಿ : ಶಾಸಕ ಟಿ.ರಘುಮೂರ್ತಿ ಸೂಚನೆ

Facebook
Twitter
Telegram
WhatsApp

ಚಿತ್ರದುರ್ಗ : ಕಂದಾಯ ಇಲಾಖೆಯ ಸಹಯೋಗದಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಏರ್ಪಡಿಸುವ ಪಿಂಚಣಿ ಅದಾಲತ್ (ಸಾಮಾಜಿಕ ಭದ್ರತಾ ಯೋಜನೆಗಳ ಮಂಜೂರಾತಿ) ಸೌಲಭ್ಯಗಳ ಸದುಪಯೋಗವನ್ನು ಅರ್ಹರು ಪಡೆಯಬೇಕು ಮತ್ತು ಯಾರು ಸಹ ಸರ್ಕಾರದ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಿ ಎಂದು ಶಾಸಕ ಮತ್ತು ಸಣ್ಣ ಕೈಗಾರಿಕೆಗಳು ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.

ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಯ ತುರುವನೂರು ಗ್ರಾಮದಲ್ಲಿ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಪಿಂಚಣಿ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದರು.

ತುರುವನೂರು ಹೋಬಳಿಯಲ್ಲಿ ಇಂದು 50 ಫಲಾನುಭವಿಗಳಿಗೆ ಪಿಂಚಣಿ ಪ್ರಮಾಣ ವಿತರಿಸಿದ್ದೇವೆ. ತುರುವನೂರು ಹೋಬಳಿಯಲ್ಲಿ ಈಗಾಗಲೇ 8834 ಜನ ಫಲಾನುಭವಿಗಳು ಪಿಂಚಣಿ ಪಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಪಿಂಚಣಿ ಸೌಲಭ್ಯದಿಂದ ಎಲ್ಲಾರನ್ನೂ ಪಿಂಚಣಿ ಸೌಲಭ್ಯ ಒದಗಿಸಲು ಅಧಿಕಾರಿಗಳು ಪ್ರತಿ ಹಳ್ಳಿಯಲ್ಲಿ ಪರಿಶೀಲನೆ ನಡೆಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ತುರುವನೂರು ಗ್ರಾಮ ಮತ್ತು ಹೋಬಳಿಯ ಹಳ್ಳಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಬೇಕು. ತುರುವನೂರು ಗ್ರಾಮದಲ್ಲಿ ಡಿಗ್ರಿ ಕಾಲೇಜು ಕಾಮಗಾರಿ ಪೂರ್ಣಗೊಂಡಿದೆ. ರಸ್ತೆ ಕಾಮಗಾರಿಗಳನ್ನು ಹಂತ ಹಂತವಾಗಿ ಮಾಡಲಾಗುತ್ತಿದೆ.

ನಮ್ಮ ಸರ್ಕಾರದ ಜನಪ್ರಿಯ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ ಸೇರಿ ಸರ್ಕಾರದ ಸೌಲಭ್ಯದಿಂದ ಹೊರಗುಳಿದ ಕುಟುಂಬಗಳನ್ನು ಸರ್ಕಾರದ ಸೌಲಭ್ಯ ಪಡೆಯುವ ಕಡೆ ಜನರನ್ನು ಕರೆ ತರಬೇಕು ಎಂದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಉಪ ವಿಭಾಗಾಧಿಕಾರಿ ಕಾರ್ತಿಕ್, ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ, ಮಾ.ಜಿಪಂ ಸದಸ್ಯ ಬಾಬುರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯರಾದ ಡಿ.ಆರ್.ಮಂಜುನಾಥ್, ನಾಗವೇಣಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಖಾಲಿಂ ಮತ್ತು ಇತರೆ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಉದ್ಯೋಗದಲ್ಲಿ ಸಹ ಉದ್ಯೋಗಿಗಳು ನಿಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವರು

ಈ ರಾಶಿಯವರಿಗೆ ಉದ್ಯೋಗದಲ್ಲಿ ಸಹ ಉದ್ಯೋಗಿಗಳು ನಿಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವರು, ಈ ರಾಶಿಯವರ ವೈರಿಗಳಿಂದ ಎಲ್ಲಾ ಕಾರ್ಯಗಳನ್ನು ವಿಘ್ನಗೊಳಿಸಲು ಒಳಸಂಚು, ಮಂಗಳವಾರ ರಾಶಿ ಭವಿಷ್ಯ -ಡಿಸೆಂಬರ್-24,2024 ಸೂರ್ಯೋದಯ: 06:47, ಸೂರ್ಯಾಸ್ತ : 05:44

ಎಸ್.ಎಂ.ಕೃಷ್ಣ ಮನೆಗೆ ಯಶ್ ಭೇಟಿ : ಮಾಜಿ ಸಿಎಂ ಬಗ್ಗೆ ರಾಕಿಬಾಯ್ ಹೇಳಿದ್ದೇನು..?

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಇತ್ತೀಚೆಗಷ್ಟೇ ನಿಧನರಾಗಿದ್ದರು. ಮಂಡ್ಯ ಜಿಲ್ಲೆಯ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರವನ್ನು ನಡೆಸಲಾಗಿತ್ತು. ಆ ಸಮಯದಲ್ಲಿ ಯಶ್ ಶೂಟಿಂಗ್ ನಲ್ಲಿದ್ದ ಕಾರಣ ಬರಲು ಸಾಧ್ಯವಾಗಿರಲಿಲ್ಲ. ಇದೀಗ ಇಂದು

ದರ್ಶನ್ ಗೆ ಜಾಮೀನು ಸಿಕ್ಕ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದ ವಿಜಯಲಕ್ಷ್ಮಿ..!

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿಗೆ ಸಂಬಂಧಿಸಿದಂತೆ ದರ್ಶನ್ ಜೈಲು ವಾಸ ಅನುಭವಿಸಿದರು. ಸುಮಾರು ಐದು ತಿಂಗಳ ಕಾಲ ಜೈಲಿನಲ್ಲಿಯೇ ಇದ್ದರು. ಬಳಿಕ ಅನಾರೋಗ್ಯದ ಕಾರಣದಿಂದ ಮಧ್ಯಂತರ ಜಾಮೀನು ಪಡೆದು ಬಿಜಿಎಸ್ ಆಸ್ಪತ್ರೆಗೆ ದಾಖಲಾದರು.

error: Content is protected !!