Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ನಾಯಕರ ವಿರುದ್ಧ ವಿನಯ್ ಕುಲಕರ್ಣಿ ಆಕ್ರೋಶ : ಯಾಕೆ ಗೊತ್ತಾ..?

---Advertisement---

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಒಂದಷ್ಟು ವಾಗ್ವಾದಗಳು ನಡೆಯುತ್ತಿವೆ. ಸಿಟಿ ರವಿ ಹಾಗೂ ಶಾಸಕ ಮುನಿರತ್ನ ಪ್ರಕರಣಗಳನ್ನು ಹಿಡಿದು ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ. ನಕಲಿ ಪ್ರಕರಣ, ನಕಲಿ ಸರ್ಕಾರ ಎಂದೆಲ್ಲಾ ಮಾತನಾಡುತ್ತಿರುವುದನ್ನು ಶಾಸಕ ವಿನಯ್ ಕುಲಕರ್ಣಿ ಖಂಡಿಸಿದ್ದಾರೆ‌. ಸಿಟಿ ರವಿ ಅವರೇ ಫೇಕ್ ಎಂದು ತಿರುಗೇಟು ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ವಿನಯ್ ಕುಲಕರ್ಣಿ ಅವರು, ಫೇಕ್ ಎನ್ಕೌಂಟರ್ ಎಲ್ಲಿಂದ ಬಂತು. ಹುಚ್ಚರ ಕೈಯಲ್ಲಿ ಕಲ್ಲು ಕಿಟ್ಟಂತೆ ಬಿಜೆಪಿಯವರು ಮಾತನಾಡುತ್ತಾರೆ. ಇವರು ಯಾಕೆ ಕಲ್ಲಿನಲ್ಲಿ ಹೊಡೆಯುತ್ತಾರೆ ಎಂಬುದು ಯಾರಿಗೆ ಗೊತ್ತು. ಬಿಜೆಪಿ ನಾಯಕರಿಗೆ ಅವರೇ ಮಾತೇ ಬಂಡವಾಳ. ಅವರು ಸಂಘಟನೆ ಮೂಲಕ ಬಂದವರಲ್ಲ. ಜಾತಿ ಜಾತಿ ನಡುವೆ ವಿಷ ಬೀಜ ಬಿತ್ತಿ ಅದರ ಮೇಲೆ ಬೆಂಕಿ ಹಚ್ಚೋದು ಬಿಜೆಪಿ ನಾಯಲರ ಕೆಲಸ.

ನಮ್ಮ ಕಾಂಗ್ರೆಸ್ ಗೆ ದೊಡ್ಡ ಇತಿಹಾಸವಿದೆ. ಸುಳ್ಳು ಆರೋಪ ಮಾಡುವುದು, ಸುಳ್ಳು ಪ್ರಕರಣ ದಾಖಲಿಸುವುದು ಬಿಜೆಪಿಗರ ಕೆಲಸ. ನಕಲಿ ಎಂದರೆ ಏನು..? ನಕಲು ಕಾಂಗ್ರೆಸ್ ಎನ್ನುವವರು ಗೂಡ್ಸೆ ವಾದಿಗಳು. ನಾವೂ ಗಾಂಧಿ ವಾದಿಗಳು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಬಾಯಿಂದ ಇಂತಹ ಮಾತುಗಳೇ ಬರುವುದು. ಅವರ ಮಾತನ್ನ ಒಂದು ಕಿವಿಯಲ್ಲಿ ಕೇಳಿಸಿಕೊಂಡು ಮತ್ತೊಂದು ಕಿವಿಯಲ್ಲಿ ಬಿಟ್ಟು ಬಿಡಬೇಕು ಅಷ್ಟೇ ಎಂದು ಶಾಸಕ ವಿನಯ್ ಕುಲಕರ್ಣಿ ಅವರು ವ್ಯಂಗ್ಯ ಮಾಡಿದ್ದಾರೆ. ಸಿಟಿ ರವಿ ಪ್ರಕರಣ ಹಾಗೂ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment