ನಾಳೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ..!

 

ನವದೆಹಲಿ: ವಯೋಸಹಜ ಅನಾರೋಗ್ಯದಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಶನಿವಾರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು. ಇಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

 

ಗುರುವಾರ ರಾತ್ರಿಯಿಂದಾನೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮನಮೋಹನ್ ಸಿಂಗ್ ನಿಧನದ ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗಿದೆ. ಕೇಂದ್ರ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಇಂದು ರದ್ದು ಮಾಡಲಾಗಿದೆ. ಇಂದಿನಿಂದ ಏಳು ದಿನಗಳ ಕಾಲ ದೇಶದಲ್ಲಿ ಶೋಕಾಚರಣೆಯನ್ನು ಘೋಷಿಸಲಾಗಿದೆ. ಇಂದು ನಡೆಯಬೇಕಿದ್ದ ಕಾಂಗ್ರೆಸ್ ಸಮಾವೇಶವನ್ನು ರದ್ದುಗೊಳಿಸಿ, ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದಾರೆ.

ಇನ್ನು ಮನಮೋಹನ್ ಸಿಂಗ್ ಅವರ ಮಗಳು ವಿದೇಶದಿಂದ ಬರಬೇಕಿದ್ದು, ಇಂದು ಮಧ್ಯಾಹ್ನ ಅಥವಾ ಸಂಜೆ ದೆಹಲಿ ತಲುಪಲಿದ್ದಾರೆ. ಆನಂತರ ಎಲ್ಲಾ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ತಿಳಿಸಿದ್ದಾರೆ. ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಅಮೆರಿಕಾ ಸರ್ಕಾರ ಕೂಡ ಗೌರವ ಸಲ್ಲಿಸಿದೆ. ಮನಮೋಹನ್ ಸಿಂಗ್ ಅವರನ್ನು ಆರ್ಥಿಕ ಸುಧಾರಣೆಯ ವಿಚಾರಕ್ಕೆ ಸದಾ ನೆನಪಿಸಿಕೊಳ್ಳಲಾಗುತ್ತದೆ. ಅವರು ಭಾರತದ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಿದರು. ಅಮೆರಿಕಾ ಹಾಗೂ ಭಾರತದ ಕಾರ್ಯತಂತ್ರದ ಪಾಲುದಾರಿಕೆಯ ಬೆಂಬಲಿಗರಾಗಿದ್ದರು ಎಂದು ನುಡಿ ನಮನದಲ್ಲಿ ಅಮೆರಿಕಾ ಸರ್ಕಾರ ಉಲ್ಲೇಖ ಮಾಡಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರಿದೆ.

Leave a Reply

Your email address will not be published. Required fields are marked *

error: Content is protected !!