Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ

---Advertisement---

ಚಿತ್ರದುರ್ಗ. ಜ.01: ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಪೂರ್ಣಗೊಳಿಸಲು 2025ರ ಜ.05 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸ್ತುತ ಅರ್ಜಿ ಸಲ್ಲಿಕೆ ಕಾಲಾವಧಿ ಮುಕ್ತಾಯಗೊಂಡಿದ್ದು,  ಅರ್ಜಿ ಸಲ್ಲಿಸುವಾಗ ವೆಬ್‍ಸೈಟ್‍ನಲ್ಲಿ ಒಟ್ಟು 04 ಹಂತಗಳಿದ್ದು, ಮೊದಲನೇ ಹಂತದಲ್ಲಿ ಆನ್‍ಲೈನ್ ತಂತ್ರಾಂಶದಲ್ಲಿ ನಿಗಧಿತ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬುವುದು, ಎರಡನೇ ಹಂತದಲ್ಲಿ ತಮ್ಮ ಭಾವಚಿತ್ರ ಸಹಿ ಅಪ್‍ಲೋಡ್ ಮಾಡುವುದು. ಮೂರನೇ ಹಂತ ತಮ್ಮ ದಾಖಲಾತಿಗಳನ್ನು ಅಪ್‍ಲೋಡ್ ಮಾಡುವುದು ಹಾಗೂ ನಾಲ್ಕನೇ ಹಂತ ತಮ್ಮ ಆಧಾರ್ ಸಂಖ್ಯೆ ನಮೂದಿಸಿ ಇ-ಹಸ್ತಾಂಕ್ಷರದೊಂದಿಗೆ ಅರ್ಜಿ ಪೂರ್ಣಗೊಳಿಸಬೇಕಾಗಿರುತ್ತದೆ. ಇದರಲ್ಲಿ ಕೆಲವರು ಮೊದಲನೇ ಹಂತದಲ್ಲಿಯೇ ಅಪ್ಲಿಕೇಶನ್ ಸಕ್ಸಸ್‍ಪುಲ್ ಅಪ್‍ಲೋಡ್ ಎಂಬ ಸಂದೇಶ ಅವರುಗಳ ಮೊಬೈಲ್‍ಗೆ ಸ್ವೀಕೃತವಾಗಿರುವುದರಿಂದ ಅರ್ಜಿ ಪೂರ್ಣಗೊಳಿಸಿರುವುದಿಲ್ಲ.

 

ಅರ್ಜಿ ಸಲ್ಲಿಸುವ ನಾಲ್ಕು ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2025ರ ಜ.5 ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment