ಚಿಕ್ಕಬಳ್ಳಾಪುರ: ಸದ್ಯ ಎಲ್ಲಾ ಪಕ್ಷಗಳು ಪರಿಷತ್ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಪಕ್ಷದ ಮುಖಂಡರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಜಿಲ್ಲೆಯಲ್ಲಿ ಪ್ರಚಾರಕ್ಕೆ ತೆರಳಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಗರಂ ಆಗಿದ್ದಾರೆ.
ಇತ್ತೀಚೆಗಷ್ಟೇ ದೇವೇಗೌಡ ಅವರು ದೆಹಲಿಗೆ ತೆರಳಿದ್ದರು. ಆ ವೇಳೆ ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿ ಒಂದಷ್ಟು ಚರ್ಚಿಸಿ ಬಂದಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ದೇವೇಗೌಡ ಅವರು, ನಾನು ಪ್ರಧಾನಿಯನ್ನು ಭೇಟಿ ಮಾಡೋದಕ್ಕೆ ಸಿದ್ದರಾಮಯ್ಯ ಅವರ ಅನುಮತಿ ಪಡೆಯಬೇಕಾ ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ.
ಅವರುಗೇನು ನನ್ನ ಪಕ್ಷವನ್ನ ಸೆರಂಡರ್ ಮಾಡಿದ್ದೀನಾ..? ಕಾಂಗ್ರೆಸ್ ಗೆ ಬೆಂಬಲ ಕೊಡುವ ತೀರ್ಮಾನ ಮಾಡುವುದು ಇನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ. ಕುಮಾರಸ್ವಾಮಿ ಅಂದು ನನ್ನ ಅನುಮತಿ ಇಲ್ಲದೆ ಅವರ ಜೊತೆ ಸೇರಿ ಸರ್ಕಾರ ರಚಿಸಿದ್ರು. ಸರ್ಕಾರ ಕೆಡವಿ ಸಿಎಂ ಆಗಿದ್ದ ಕುಮಾರಸ್ವಾಮಿಯನ್ನ ಇಳಿಸಿದವರು ಯಾರು ಎಂದು ಮೊದಲು ಉತ್ತರ ಕೊಡಲಿ. ನಾನು ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ್ದೇನೆ. ವಾಜಪೇಯಿ ಅವರನ್ನು ಭೇಟಿ ಮಾಡಿದ್ದೇನೆ. ಹಾಗೇ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ್ದೇನೆ ಎಂದಿದ್ದಾರೆ.