ಚಿತ್ರದುರ್ಗ | ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

suddionenews
1 Min Read

 

ವರದಿ ಮತ್ತು ಫೋಟೋ ಕೃಪೆ

ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 07 : ರಸ್ತೆ ಅಗಲೀಕರಣಕ್ಕೆ ಮತ್ತೊಮ್ಮೆ ಕಟ್ಟಡಗಳ ಮೇಲೆ ಕೆಂಪು ಗುರುತು ಮಾಡುತ್ತಿರುವ ಜಿಲ್ಲಾಡಳಿತ ಯಾವುದೇ ತಾರತಮ್ಯವಿಲ್ಲದೆ ಕೂಡಲೆ ರಸ್ತೆ ಅಗಲೀಕರಣಕ್ಕೆ ಮುಂದಾಗಬೇಕೆಂದು ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಯ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದ ಮುಂಭಾಗದಿಂದ ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ ಹಾಗೂ ಮೆದೆಹಳ್ಳಿ ರಸ್ತೆ ಅಗಲೀಕರಣವಾಗಬೇಕು. ಪಾದಚಾರಿಗಳು ಸಂಚರಿಸಲು ಫುಟ್‍ಪಾತ್ ಇಲ್ಲದಿರುವುದರಿಂದ ಕಿಷ್ಕಿಂದೆಯಾದ ರಸ್ತೆಯಲ್ಲಿಯೇ ಬಸ್, ಲಾರಿ, ಕಾರು, ಆಟೋ, ದ್ವಿಚಕ್ರ ವಾಹನಗಳು ಸಂಚರಿಸಬೇಕು. ಇದರಿಂದ ಪ್ರಯಾಣಿಕರು, ಜನಸಾಮಾನ್ಯರು ಕಿರಿಕಿರಿ ಅನುಭವಿಸುವಂತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಡಳಿತ, ನಗರಸಭೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ರಸ್ತೆ ಅಗಲೀಕರಣಕ್ಕೆ ಮುಂದಾಗಬೇಕು. ಕೆಲವೆಡೆ ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ತೆರವುಗೊಳಿಸಿದರೆ ಮಳೆ ನೀರು ಸರಾಗವಾಗಿ ಹರಿದು ಹೋಗುತ್ತದೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಎಸ್. ನಗರಾಧ್ಯಕ್ಷ ಅವಿನಾಶ್, ವಿದ್ಯಾರ್ಥಿ ಘಟಕದ ಅಖಿಲೇಶ್
ಹರೀಶ್‍ಕುಮಾರ್, ನಿರಂಜನ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *