ಬೆಂಗಳೂರು: ಶಾಸಕಾಂಗ ಸಭೆ ಮುಗಿಸಿ ಹೊರಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೀಡಾಗಿದೆ. ಕಾರು ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚೆನ್ನರಾಜು ಹಟ್ಟಿಹೊಳಿ ಅವರಿಗೆ ಗಾಯವಾಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
![](https://suddione.com/content/uploads/2024/10/gifmaker_me-5-1.gif)
ಚಾಲಕನ ನಿಯಂತ್ರಣ ತಪ್ಪಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇದ್ದಂತ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ನಾಯಿ ಅಡ್ಡ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಗುದ್ದಿ ಅಪಘಾತಕ್ಕೀಡಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಚೆನ್ನರಾಜು ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರನ್ನು ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಆಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಕಾರಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಸಕಾಂಗ ಸಭೆ ಮುಗಿಸಿ ಬರುವಾಗ ಈ ದುರ್ಘಟನೆ ನಡೆದಿದೆ.
![](https://suddione.com/content/uploads/2025/01/studio-11.webp)