Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶ್ರೀ ಸಿದ್ಧರಾಮೇಶ್ವರರು ವಿಶ್ವ ಮಾನವರು : ಎಡಿಸಿ ಬಿ.ಟಿ.ಕುಮಾರಸ್ವಾಮಿ

---Advertisement---

ಚಿತ್ರದುರ್ಗ.ಜ.14: ವಚನಗಳು ಪಠ್ಯಕ್ಕೆ ಮಾತ್ರ ಸೀಮಿತವಲ್ಲ. ವಿದ್ಯಾರ್ಥಿಗಳು ಅವುಗಳ ಆಳ-ಅಗಲ ತಿಳಿದಾಗ ಮಾತ್ರ ಮಹನೀಯರ ಚಿಂತನೆಗಳನ್ನು ಅರ್ಥೈಸಿಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಆಯೋಜಿಸಲಾದ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಮಹನೀಯರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಸಿದ್ಧರಾಮೇಶ್ವರರು ಇಂತಹದೇ ಜಾತಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಜನಿಸಲಿಲ್ಲ. ಅವರ ಕೊಡುಗೆಗಳು ಸಹ ಒಂದು ಜಾತಿಗೆ ಸೀಮಿತವಾಗಿಲ್ಲ. ಸಮಾಜದ ಎಲ್ಲ ವರ್ಗಗಳ ಏಳಿಗೆಗೆ ಶ್ರಮಿಸಿದರು. ಭಕ್ತಿ ಹಾಗೂ ಕಾಯಕ ನಿಷ್ಠೆ ಮೂಲಕ ಸಮಾಜಮುಖಿ ಕಾರ್ಯಗಳನ್ನು ಸಿದ್ಧರಾಮೇಶ್ವರರು ಕೈಗೊಂಡರು. ಅವರ ವಚನಗಳು ಇಂದಿನ ಸಮಾಜದಲ್ಲೂ ಪ್ರಸ್ತುತ ಎನಿಸಿವೆ. ರಾಷ್ಟ್ರಕವಿ ಕುವೆಂಪು ಅವರು ಹೇಳಿದಂತೆ ಸಿದ್ಧರಾಮೇಶ್ವರರು ವಿಶ್ವ ಮಾನವರಾಗಿದ್ದಾರೆ ಎಂದರು.

ಭೋವಿ ಸಮಾಜದವರು ಶ್ರಮ ಜೀವಿಗಳಾಗಿದ್ದು, ಕಾಯಕ ನಿಷ್ಠೆ ಹೊಂದಿದ್ದಾರೆ. ಶಿಕ್ಷಣ ಹಾಗೂ ಸಂಘಟನೆ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಚಿತ್ರದುರ್ಗ ಬಾಲಕರ ಸರ್ಕಾರಿ ಪದವಿಪೂರ್ವ  ಕಾಲೇಜಿನ ಉಪನ್ಯಾಸಕ ಡಾ.ಬಿ.ಎಂ.ಗುರುನಾಥ ಉಪನ್ಯಾಸ ನೀಡಿ, ಸಿದ್ಧರಾಮರು ಲೋಕೋಪಯೋಗಿ, ಜನಹಿತ ಕಾರ್ಯಗಳಿಂದ ಎಲ್ಲರ ಬದುಕನ್ನು ಬೆಳೆಸಿದವರು ಹಾಗೂ ಬೆಳಗಿಸಿದವರು. ಲೋಕೋಪಯೋಗಿ ಶರಣ ಸಿದ್ದರಾಮರು ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾರೆ. ಯಾವ ವ್ಯಕ್ತಿ, ವ್ಯಕ್ತಿತ್ವ ಜನಸಮುದಾಯದಲ್ಲಿ ಉಳಿಯುತ್ತಾರೆಯೋ ಆ ವ್ಯಕ್ತಿಯ ನಡೆ-ನುಡಿ ಚಂದ ಹಾಗೂ ಸತ್ಯವಾಗಿರುತ್ತವೆ ಎಂದು ಅಭಿಪ್ರಾಯಪಟ್ಟರು.

 

ಭಕ್ತನಾದರೆ ಬಸವಣ್ಣನಾಗಬೇಕು. ಜಂಗಮನಾದರೆ ಪ್ರಭುವಿನಂತಾಗಬೇಕು. ಭೋಗಿಯಾದರೆ ನಮ್ಮ ಶ್ರೀಗುರು ಚನ್ನಬಸವಣ್ಣನಂತಾಗಬೇಕು. ಯೋಗಿಯಾದರೆ ನನ್ನಂತಾಗಬೇಕು ಎಂಬ ಸಿದ್ದರಾಮರ ಆತ್ಮನಿವೇದನೆಯ ಮಾತು ಬಹಳ ಮುಖ್ಯವಾದದು. ಇದು ಸಿದ್ಧರಾಮರ ಗುಣವಿಶೇಷವು ಹೌದು ಎಂದರು.

ಇಂದು ವ್ಯಕ್ತಿಪ್ರತಿಷ್ಠೆ, ಆತ್ಮರತಿಗೆ ಒಳಗಾಗಿ ನುಡಿಯುವ ನಾಲಿಗೆ ಮಲಿನತೆಗೆ ಜಾರಿದೆ. ಇನ್ನೊಬ್ಬರನ್ನು ಅಪಮಾನಿಸುವ ನುಡಿ, ವಿಜೃಂಭಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮರ ಮತ್ತು ಇದೇ ರೀತಿಯಲ್ಲಿ ನುಡಿ ಬಗೆಗೆ ಹೇಳಿದವರ ಆದರ್ಶ ನಮ್ಮದಾಗಬೇಕು. ಆತ್ಮರತಿ, ವ್ಯಕ್ತಿಪ್ರತಿಷ್ಠೆಯೇ ಮೆರೆಯುತ್ತಿರುವ ಈ ಹೊತ್ತಿಗೆ ಸಿದ್ಧರಾಮರ ವಚನಗಳು ಜೀರ್ಣವಾಗುವುದು ಕಷ್ಟ ಎಂದರು.

ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ಮಾತನಾಡಿ, 12ನೇ ಶತಮಾನದಲ್ಲಿ ಕಾಯಕಯೋಗಿ ಸಿದ್ಧರಾಮರು ಮಾಡಿದ ಕಾಯಕದಿಂದಾಗಿ ಇಂದು ನಾವು ಸಿದ್ಧರಾಮೇಶ್ವರರ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ಕಾಯಕದಿಂದ ಕೈಲಾಸ ಕಂಡ ಪುಣ್ಯಾತ್ಮರು ಸಿದ್ಧರಾಮರು ಎಂದು ಅಭಿಪ್ರಾಯಪಟ್ಟರು.
ಶಿವಯೋಗಿ ಸಿದ್ಧರಾಮರು ಕಾಯಕದ ಜೊತೆಗೆ ಹಲವಾರು ವಚನಗಳನ್ನು ರಚನೆ ಮಾಡಿದ್ದಾರೆ. ಕೆರೆ-ಕಟ್ಟೆ, ಬಾವಿ ನಿರ್ಮಾಣ, ರಸ್ತೆ ನಿರ್ಮಾಣ ಸೇರಿದಂತೆ ಸಿದ್ಧರಾಮರು ಹೇಳಿದ ಕಾಯಕವನ್ನು ಇಂದಿಗೂ ಸಮಾಜ ಮುಂದುವರೆಸಿಕೊಂಡು ಬರುತ್ತಿದೆ ಎಂದು ಹೇಳಿದರು.

ಜಯಂತಿ ಅಂಗವಾಗಿ ಮೊಳಕಾಲ್ಮುರು ತಾಲ್ಲೂಕು ಚಿಕ್ಕೋಬನಹಳ್ಳಿಯ ಮುರಾರ್ಜಿ ಮತ್ತು ತಂಡದವರು ಗೀತಗಾಯನ ಪ್ರಸ್ತುತ ಪಡಿಸಿದರು. ಸಿ.ರಂಗನಾಯ್ಕ್ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಭೋವಿ ಸಂಘದ ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ಕೋಶಾಧ್ಯಕ್ಷ ಮಂಜುನಾಥ್, ನಿಕಟಪೂರ್ವ ಅಧ್ಯಕ್ಷ ತಿಮ್ಮಣ್ಣ, ಭೋವಿ ಗುರುಪೀಠದ ಸಿಇಒ ಗೌನಹಳ್ಳಿ ಗೋವಿಂದಪ್ಪ, ಬಂಜಾರ ಸಮಾಜದ ಮುಖಂಡ ನರೇನಹಳ್ಳಿ ಅರುಣ್ ಕುಮಾರ್, ಸಮಾಜದ ಮುಖಂಡರಾದ ಭರತ್, ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಆಚರಣೆ ಸಮಾರಂಭದಲ್ಲಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪುಷ್ಪನಮನ ಸಲ್ಲಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment