Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ಯಾಂಡಲ್ ವುಡ್ ಹಿರಿಯ ಕಲಾವಿದ ಸರಿಗಮ ವಿಜಿ ನಿಧನ : ನಟನಿಗೆ ಏನಾಗಿತ್ತು..?

---Advertisement---

ಬೆಂಗಳೂರು: 1980ರಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ನಟ, 269ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ನಟ ಸರಿಗಮ ವಿಜಿ ಇನ್ನಿಲ್ಲ. ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮ ವಿಜಿ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ 4 ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಯಶವಂತಪುರದಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ವಿಜಿಗೆ 76 ವರ್ಷ ವಯಸ್ದಾಗಿತ್ತು. ಇಂದು ಬೆಳಗ್ಗೆ 9.30ರ ಸುಮಾರಿಗೆ ನಿಧನರಾಗಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಬಳಿ ಇರುವ ನಿವಾಸಕ್ಕೆ ಪಾರ್ಥಿವ ಶರೀರವನ್ನು ತಂದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಇಷ್ಡು ದಿನಗಳ ಕಾಲ ಆರೋಗ್ಯವಾಗಿಯೇ ಇದ್ದಂತ ಸರಿಗಮ ವಿಜಿ ಅವರು ಇದ್ದಕ್ಕಿದ್ದ ಹಾಗೇ ಅನಾರೋಗ್ಯಕ್ಕೀಡಾಗಿದ್ದರು. ಅವರ ಪುತ್ರ ರೋಹಿತ್ ಮಾತನಾಡಿ, ತಂದೆ ಆರೋಗ್ಯವಾಗಿಯೇ ಇದ್ದರು. ವಾರದ ಹಿಂದೆ ದಿಢೀರನೇ ಎದೆನೋವು ಕಾಣಿಸಿಕೊಂಡಿತ್ತು. ಇಷ್ಟು ಸೀರಿಯಸ್ ಆಗುತ್ತೆ ಅಂತ ನಾವೂ ಅಂದುಕೊಂಡಿರಲಿಲ್ಲ ಎಂದಿದ್ದಾರೆ.

ಇನ್ನು ಕೆಲವು ದಿನಗಳ ಹಿಂದಷ್ಟೇ ವಿಜಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕಫ ಹೆಚ್ಚಗಿರೋದ್ರಿಂದ ನೆಬ್ಯುಲೈಸೇಶನ್ ಮಾಡಲಾಗಿತ್ತು. ಅದು ನಂತರ ನೀರಾಗಿ ಲಂಗ್ಸ್ ಸೇರಿತ್ತು. ಬಹು ಅಂಗಾಂಗಗಳ ಡ್ಯಾಮೇಜ್ ಆಗಿ ಈ ರೀತಿಯ ಸಮಸ್ಯೆ ಆಗಿದೆ ಎನ್ನಲಾಗಿದೆ. ಸರಿಗಮ ವಿಜಿ ಸುಮಾರು 269ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. 75ಕ್ಕೂ ಅಧಿಕ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ದುಡಿದಿದ್ದಾರೆ. ಡಕೋಟಾ ಎಕ್ಸ್‌ಪ್ರೆಸ್‌ ವಿಜಿ ಅವರ ಕೊನೆಯ ಸಿನಿಮಾವಾಗಿತ್ತು. ಟೈಗರ್ ಪ್ರಭಾಕರ್ ಜೊತೆಗಿನ ಕಾಂಬಿನೇಷನ್ ಹಿಟ್ ಆಗಿತ್ತು. ಇಂದು ಈ ಹಿರಿಯ ಕಲಾವಿದ ಎಲ್ಲರನ್ನು, ಎಲ್ಲವನ್ನು ಬಿಟ್ಟು ಅಗಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment