Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೀಂ ಇಂಡಿಯಾದ ಸತತ ಸೋಲು : ಗಂಭೀರ್ ಕೋಚ್ ಹುದ್ದೆಗೆ ಕಂಟಕ..!

---Advertisement---

ಗೌತಮ್ ಗಂಭೀರ್ ಹೊಸದಾಗಿ ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆಯಾಗಿದ್ದರು. ಆದರೆ ಅವರ ನೇತೃತ್ವದಲ್ಲಿ ಟೀಂ ಇಂಡಿಯಾ ಹೆಚ್ಚು ಗೆಲುವು ಸಾಧಿಸುತ್ತಿಲ್ಲ. 10 ಟೆಸ್ಟ್ ಪಂದ್ಯಗಳನ್ನಾಡಿದ್ದು, 6 ಮ್ಯಾಚ್ ಗಳಲ್ಲಿ ಸೋಲು ಕಂಡಿದೆ. ಮೂರು ಏಕದಿನ ಪಂದ್ಯಗಳಲ್ಲಿ 2 ಸೋಲು ಹಾಗೂ 1 ಡ್ರಾ ಸಾಧಿಸೊದೆ. ಹಾಗೆ 10 ಟಿ 20 ಪಂದ್ಯಗಳಲ್ಲಿ 9 ಟೆಸ್ಟ್ ನಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಈ ರೀತಿ ಭಾರತ ತಂಡದ ಹೀನಾಯ ಸೋಲಿನಿಂದಾಗಿ ಗಂಭೀರ್ ಹುದ್ದೆಗೂ ಕಂಟಕ ಎದುರಾಗಿದೆ.

ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸರಣಿ ಸೋಲಿನ ಬಳಿಕ ಗೌತಮ್ ಗಂಭೀರ್ ಅವರ ಕೋಚಿಂಗ್ ಶೈಲಿಯ ಬಗ್ಗೆ ಚರ್ಚೆಗಳು ಶುರುವಾಗಿದ್ದವು. ಬಿಸಿಸಿಐ ಕೂಡ ಈ ಬಗ್ಗೆ ಪರಿಶೀಲನೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಮುಂಬರುವ ಚಾಂಪಿಯನ್ ಟ್ರೋಫಿಯಲ್ಲಿ ಟೀಂ ಇಂಡಿಯಾದ ಪ್ರದರ್ಶನದ ಆಧಾರದ ಮೇಲೆ ಗೌತಮ್ ಗಂಭೀರ್ ಅವರ ಕೋಚ್ ಹುದ್ದೆ ಗಟ್ಟಿಯಾಗಲಿದೆ.

 

2027ರ ಏಕದಿನ ವಿಶ್ವಕಪ್ ತನಕ ಗೌತಮ್ ಗಂಭೀರ್ ಅವರೇ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ತಿಳಿಸಿತ್ತು. ಆದರೆ ಈಗ ಚಾಂಪಿಯನ್ ಟ್ರೋಫಿಯಲ್ಲೇನಾದರೂ ಟೀಂ ಇಂಡಿಯಾ ಸೋತರೆ ಮುಖ್ಯ ಕೋಚ್ ಹುದ್ದೆಯಿಂದ ಗೌತಮ್ ಗಂಭೀರ್ ಅವರನ್ನು ಕೆಳಗಿಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಗೌತಮ್ ಗಂಭೀರ್ ಪಾಲಿಗೆ ಈ ಚಾಂಪಿಯನ್ ಟ್ರೋಫಿ ಒಂದು ರೀತಿ ಅಗ್ನಿ ಪರೀಕ್ಷೆ ಇದ್ದಂತೆ‌. ಜೊತೆಗೆ ಆಟಗಾರರು ಹಾಗೂ ಗೌತಮ್ ಗಂಭೀರ್ ನಡುವೆ ಎಲ್ಲವೂ ಸರಿ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...