Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಿಂದ ಬೆಂಗಳೂರಿಗೆ ಬರುವಾಗ ಓಂ ಶಕ್ತಿ ಮಾಲಾಧಾರಿಗಳಿಗೆ ಗುದ್ದಿದ ಶಾಸಕ ಪಪ್ಪಿ ಕಾರು..!

---Advertisement---

ಬೆಂಗಳೂರು: ಓಂ ಶಕ್ತಿ ಮಾಲಾಧಾರಿಗಳಿಗೆ ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಅವರ ಕಾರು ಗುದ್ದಿರುವ ಘಟನೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಈ ಕಾರು ಅಪಘಾತದಲ್ಲಿ ಓಂ ಶಕ್ತಿ ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿವೆ.

ಶಾಸಕ ವೀರೇಂದ್ರ ಪಪ್ಪಿ ಅವರು ಚಿತ್ರದುರ್ಗದಿಂದ ಬೆಂಗಳೂರಿನ ಕಡೆಗೆ ಪಯಣ ಬೆಳೆಸಿದ್ದರು. ಈ ವೇಳೆ ಕಾರು ಅಪಘಾತ ಸಂಭವಿಸಿದರ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ವಿರೇಂದ್ರ ಪಪ್ಪಿ ಅವರ ಕಾರಿನಲ್ಲಿ ವಿರೇಂದ್ರ ಪಪ್ಪಿ ಹಾಗೂ ಕಾರು ಚಾಲಕ ಸೇರಿ ಮೂವರು ಇದ್ದರು. ಅಪಘಾತ ಹೇಗಾಯ್ತು ಎಂಬ ಬಗ್ಗೆ ಪೊಲೀಸರು ಇನ್ನಷ್ಟೇ ತನಿಖೆ ನಡೆಸಲಿದ್ದಾರೆ. ಆದರೆ ಈ ಘಟನೆಯಲ್ಲಿ ಓಮ ಶಕ್ತಿ ಮಾಲೆ ಹಾಕಿದ್ದ ಮೂವರಿಗೆ ಗಾಯವಾಗಿದೆ. ಬೇಗೂರು ಗ್ರಾಮದವರೇ ಆದ ಬಿಂದು, ರಂಗಮ್ಮ ಅವರಿಗೆ ಹೆಚ್ಚಿನ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೇ ಜಾಗದಲ್ಲಿ ಕಳೆದ ಕೆಲವು ದಿನಗಳ ಹಿಂದಷ್ಟೇ ಅಪಘಾತ ಸಂಭವಿಸಿತ್ತು. ಬೆಂಗಳೂರಿಗೆ ಬರುತ್ತಿದ್ದ ಕುಟುಂಬದ ಕಾರಿನ ಮೇಲೆ ಟ್ರಕ್ ಬಿದ್ದು ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ್ದರು. ಅದರಲ್ಲಿ ಮೂವರು ಮಕ್ಕಳು ಮೃತ ಪಟ್ಟಿದ್ದರು. ಈ ಘಟನೆ ಇಡೀ ರಾಜ್ಯದ ಮನಸ್ಸನ್ನ ಕದಲಿಸಿತ್ತು. ಅದು ಕೂಡ ಬೇಗೂರು ಭಾಗದಲ್ಲಿಯೇ. ಇದೀಗ ವಿರೇಂದ್ರ ಪಪ್ಪಿ ಅವರ ಕಾರು ಅಲ್ಲಿಯೇ ಅಪಘಾತವಾಗಿದೆ. ಸದ್ಯ ಸಾವು ನೋವಿನಂತ ಘಟನೆಗಳು ಸಂಭವಿಸಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment