Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸೈಫ್ ಅಲಿ ಖಾನ್ ಗೆ ಚಾಕು ಇರಿತ : ಪೊಲೀಸರಿಂದ ಹೊರ ಬಿತ್ತು ಬಿಗ್ ಅಪ್ಡೇಟ್

---Advertisement---

 

ನಿನ್ನೆ ರಾತ್ರಿಯೇ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ಕಳ್ಳನಿಂದ ದಾಳಿ ನಡೆದಿದೆ. ಅದರಲ್ಲೂ ಸೈಫ್ ಮೇಲೆಯೇ ದಾಳಿ ಮಾಡಿದ್ದಾನೆ. ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದಿದ್ದಾನೆ. ಈ ಸಂಬಂಧ ಬಿಗ್ ಅಪ್ಡೇಟ್ ನೀಡಿದ್ದಾರೆ. ಚಾಕು ಚುಚ್ಚಿದ ವ್ಯಕ್ತಿಯನ್ನು ಪತ್ತೆ ಹಚ್ಚಲಾಗಿದೆ. ಮೆಟ್ಟಿಲುಗಳಿಂದ ಓಡಿ ಹೋಗಿದ್ದಾನೆಂದು ಮಾಹಿತಿ ನೀಡಲಾಗಿದೆ. ಈ ಘಟನೆ ಸಂಬಂಧ ಸಂಬಂಧಿಕರು ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯಲ್ಲಿ ಸೈಫ್ ಅಲಿಖಾನ್ ಮಕ್ಕಳಿರುವ ಕೋಣೆಯಲ್ಲಿ ಚಾಕು ಹಾಕಲಾಗಿದೆ. ಮನೆಗೆ ನುಗ್ಗಿ ಸೈಫ್ ಅಲಿ ಖಾನ್ ಅವರನ್ನು ಕೊಲ್ಲುವ ಪ್ರಯತ್ನ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಂದ್ರಾದಲ್ಲಿ ಸೈಫ್ ಅಲಿ ಖಾನ್ ತಮ್ಮ ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದಾರೆ. ಇವರು ವಾಸವಿರುವ ಅಪಾರ್ಟಮೆಂಟ್ ನಲ್ಲಿ ಏಳನೇ‌ ಮಹಡಿಯಲ್ಲಿ ಇವರ ಮನೆ ಇದೆ. ಆದರೆ ಅಲ್ಲಿಗೆ ಈ ವ್ಯಕ್ತಿ ಹೇಗೆ ಬಂದ ಅನ್ನೋದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅದರಲ್ಲೂ ಇಷ್ಟು ದೊಡ್ಡ ಸೆಲೆಬ್ರೆಟಿಗಳೆಲ್ಲ ಇರುವೆಡೆ ದೊಡ್ಡ ಸೆಕ್ಯೂರಿಟಿ ಇದ್ದೆ ಇರುತ್ತದೆ. ಹೀಗಿರುವಾಗ ಆ ಕಳ್ಳ ನುಗ್ಗಿದ್ದೇಗೆ ಎಂಬ ಅನುಮಾನ ವ್ಯಕ್ತವಾಗಿದೆ.

ಅಪರಿಚಿತ ವ್ಯಕ್ತಿ ಮನೆಯೊಳಗೆ ನುಗ್ಗಿದ ಕೂಡಲೇ ಮಹಿಳಾ ಸಿಬ್ಬಂದಿ ಕೂಗಲು ಶುರು ಮಾಡಿದ್ದಾರೆ. ಅದು ಸೈಫ್ ಗೆ ಕೇಳಿಸಿದ ಕೂಡಲೇ ಅಲ್ಲಿಗೆ ಓಡಿ ಬಂದಿದ್ದಾರೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕಡೆಗೆ ಆ ವ್ಯಕ್ತಿ ಸೈಫ್ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಪೊಲೀಸರಿಗೆ ಆತನ ಗುರುತು ಸಿಕ್ಕಿದ್ದು, ಪತ್ತೆ ಮಾಡುವತ್ತ ಹುಡುಕಾಟ ಶುರುವಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment