ಸುದ್ದಿಒನ್, ಗುಬ್ಬಿ, ಜನವರಿ. 16 : ಹೃದಯಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಶಮಂತ್.ಎನ್.ಜಿ (17) ಸಾವನ್ನಪ್ಪಿದ ಧಾರುಣ ಘಟನೆ ತಾಲ್ಲೂಕಿನ ನಿಟ್ಟೂರಿನಲ್ಲಿ ಗುರುವಾರ ಮಧ್ಯಾಹ್ನ ಮೂರು ನಡೆದಿದೆ.
ತಾಲೂಕಿನ ನಿಟ್ಟೂರು ಗ್ರಾಮದ ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಯಲ್ಲಿ ಓದುತ್ತಿದ್ದ ಶಮಂತ್ ಗುರುವಾರ ಪೂರ್ವ ಸಿದ್ದತಾ ಪರೀಕ್ಷೆಯನ್ನು ಬರೆದು ಬರುವಾಗ ಕಾಲೇಜಿನ ಅವರಣದಲ್ಲಿ ಮಧ್ಯಾಹ್ನ 1.30 ರ ಸುಮಾರಿಗೆ ಕುಸಿದು ಬಿದ್ದಿದ್ದಾನೆ.
ವಿಷಯ ತಿಳಿದ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿ ಗುಬ್ಬಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತರುವ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿಯು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಗುಬ್ಬಿ ಪೊಲೀಸರು ಘಟನೆಯ ಬಗ್ಗೆ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಸ್ಪತ್ರೆಯಿಂದ ಮೃತ ದೇಹವನ್ನು ಪೋಷಕರಿಗೆ ನೀಡಿ ಮುಂದಿನ ಕಾನೂನು ಕ್ರಮವನ್ನು ಪೊಲೀಸರು ಕೈಗೊಂಡರು.