ಚಿತ್ರದುರ್ಗ.ಜ.17: ಬೆಂಬಲ ಬೆಲೆಯಡಿ ಸಿರಿಧಾನ್ಯಗಳನ್ನು ಖರೀದಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪತ್ರ ಬರೆದು ಶಿಫಾರಸ್ಸು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ಮಲ್ಲಿಹಳ್ಳಿ ಗ್ರಾಮದ ಕೃಷಿಕ ಪ್ರಭುಲಿಂಗಪ್ಪ ಹಾಗೂ ಮಹೇಶ್ ಅವರ ಸಿರಿಧಾನ್ಯ ರೈತರ ಒಕ್ಕಲು ಕಣ ಹಾಗೂ ಕ್ಷೇತ್ರಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ರೈತರೊಂದಿಗೆ ಸಂವಾದ ನಡೆಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಹೊಸದುರ್ಗ ತಾಲ್ಲೂಕಿನಲ್ಲಿ ರಾಜ್ಯದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆ ಬೆಳೆಯಲಾಗುತ್ತದೆ. ಈ ಭಾಗದಲ್ಲಿ ಸಾಂಪ್ರದಾಯಿಕವಾಗಿಯೇ ಸಿರಿಧಾನ್ಯ ಬೆಳೆಯುವುದು ರೂಢಿಯಲ್ಲಿದೆ. ಕಡಿಮೆ ಮಳೆಯ ನಡುವೆ ಬರಿ ಇಬ್ಬನಿ ಆಧರಿಸಿ ವಾರ್ಷಿಕವಾಗಿ ಎರಡು ಬೆಳೆಗಳನ್ನು ರೈತರು ತೆಗೆಯುತ್ತಾರೆ. ಈ ಮೊದಲು ಸಿರಿಧಾನ್ಯಗಳಿಗೆ ಮಾರುಕಟ್ಟೆ ಇರಲಿಲ್ಲ. ಈಗ ಮಾರುಕಟ್ಟೆ ದೊರಕುತ್ತಿದೆ. ರಾಗಿ, ಭತ್ತ, ತೊಗರಿ ಮಾದರಿಯಲ್ಲಿ ಸಿರಿಧಾನ್ಯಗಳನ್ನು ಬೆಂಬಲ ಬೆಲೆಯಡಿ ಖರೀದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.
ಇದೇ ಜ.23 ರಿಂದ 25 ರವರೆಗೆ ಅಂತರರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಮೇಳ ಉದ್ಘಾಟಿಸುವರು. ದೇಶದ 25 ರಾಜ್ಯಗಳ ಕೃಷಿ ಮಂತ್ರಿಗಳು ಹಾಗೂ ಅಧಿಕಾರಿಗಳು, ರೈತರು ಭಾಗವಹಿಸುವರು. ಇದರೊಂದಿಗೆ ವಿವಿಧ ದೇಶಗಳ ಅಧಿಕಾರಿ ಹಾಗೂ ರೈತರು ಸಹ ಮೇಳದಲ್ಲಿ ಪಾಲ್ಗೊಳ್ಳುವರು. ಈ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲೂ ಸಿರಿಧಾನ್ಯಗಳಿಗೆ ಮಾರುಕಟ್ಟೆ ದೊರಕಿಸಲು ಪ್ರಯತ್ನ ಮಾಡಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











