Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಖ್ಯಮಂತ್ರಿಗಳಿಂದ ಶಾಸಕ ಬಿ.ಜಿ.ಗೋವಿಂದಪ್ಪ ಅವರಿಗೆ ಸನ್ಮಾನ

---Advertisement---

 

ಸುದ್ದಿಒನ್, ಹೊಸದುರ್ಗ, ಜನವರಿ. 17 : ಜ.23 ರಿಂದ 25 ರವರೆಗೆ ಅಂತರರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ಮುಖ್ಯಮಂತ್ರಿಗಳಿಂದ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಅವರಿಗೆ ಸನ್ಮಾನಿಸಲಾಗುವುದು ಎಂದರು.

ಅವರು, ಸ್ವತಃ ಕೃಷಿಕರಾಗಿದ್ದು, ಸಿರಿಧಾನ್ಯ ಬೆಳೆಯುವುದರೊಂದಿಗೆ ಆಹಾರದಲ್ಲಿಯೂ ಸಿರಿಧಾನ್ಯ ಬಳಸುತ್ತಿದ್ದಾರೆ. ಈ ಮೂಲಕ ತಾಲ್ಲೂಕಿನ ರೈತರಿಗೆ ಮಾದರಿಯಾಗಿದ್ದಾರೆ. ಹೊಸದುರ್ಗ ಮಾದರಿಯಲ್ಲಿ ಮಳೆ ಕಡಿಮೆ ಬೀಳುವ ರಾಜ್ಯದ ಇತರೆ ಜಾಗದಲ್ಲಿ ಸಿರಿಧಾನ್ಯ ಬೆಳೆಯಲು ರೈತರಿಗೆ ಸರ್ಕಾರದಿಂದ ಪ್ರೋತ್ಸಾಹ ನೀಡಲಾಗುವುದು.

ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಹೋಬಳಿಯ ಮಲ್ಲಿಹಳ್ಳಿ ಗ್ರಾಮದ ಕೃಷಿಕ ಪ್ರಭುಲಿಂಗಪ್ಪ ಹಾಗೂ ಮಹೇಶ್ ಅವರ ಸಿರಿಧಾನ್ಯ ರೈತರ ಒಕ್ಕಲು ಕಣ ಹಾಗೂ ಕ್ಷೇತ್ರಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ರೈತರೊಂದಿಗೆ ಸಂವಾದ ನಡೆಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಹೇಶ್ ಹಾಗೂ ಪ್ರಭುಲಿಂಗಪ್ಪ ನವರ ಸಿರಿಧಾನ್ಯ ರೈತರ ಒಕ್ಕಲು ಕಣ ಹಾಗೂ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ರೈತ ಮಹೇಶ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ರೂ.12 ಸಾವಿರಕ್ಕೆ ದುಡಿಯುತ್ತಿದ್ದರು. ಖರ್ಚು ಕಳೆದು ತಿಂಗಳಿಗೆ ರೂ.4 ಸಾವಿವರ ಮಾತ್ರ ಉಳಿಯುತ್ತಿತ್ತು. ಈಗ ಮರಳಿ ಸಮಗ್ರ ಕೃಷಿ ಪದ್ದತಿಯಲ್ಲಿ ವಾರ್ಷಿಕವಾಗಿ ಎಲ್ಲಾ ಖರ್ಚು ಕಳೆದು ರೂ.4 ಲಕ್ಷ ಲಾಭ ಗಳಿಸುತ್ತಿದ್ದಾರೆ. ರೇಷ್ಮೆ, ಕೋಳಿ ಸಾಕಾಣಿಕೆ, ಸಿರಿ ಧಾನ್ಯಗಳನ್ನು ಬೆಳದು ರಾಜ್ಯದ ಇತರೆ ಯುವಕರಿಗೂ ಮಾದರಿಯಾಗಿದ್ದಾರೆ. ಇನ್ನೊರ್ವ ರೈತ ಪ್ರಭುಲಿಂಗಸ್ವಾಮಿ ಸಹ ಸಮಗ್ರ ಕೃಷಿ ಮಾಡುತ್ತಿದ್ದು, ಯಾವುದೇ ಸಾಲ ಹಾಗೂ ಬಡ್ಡಿಯ ಜಂಜಾಟವಿಲ್ಲದೇ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಕೃಷಿ ಇಲಾಖೆ, ಕೃಷಿ ವಿಶ್ವ ವಿದ್ಯಾಲಯಗಳು ನೀಡುವ ಸಲಹೆಗಳನ್ನು ರೈತರು ಕೃಷಿಯಲ್ಲಿ ಅಳವಡಿಸಿಕೊಂಡರೆ ಜೀವನ ಸುಧಾರಿಸುವುದು ಎಂದು ಸಚಿವ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.

ಬಡವರ ಸಿರಿಧಾನ್ಯ ಇಂದು ಶ್ರೀಮಂತ ಆಹಾರವಾಗಿದೆ :

ಈ ಮೊದಲು ನವಣೆ ಅಕ್ಕಿ ಅನ್ನ ಉಣ್ಣುತ್ತಾರೆ ಎಂದರೆ, ಗ್ರಾಮೀಣ ಭಾಗದಲ್ಲಿ ಬಡವರು ಎಂದು ಭಾವಿಸಿ ಹೆಣ್ಣು ನೀಡುತ್ತಿರಲಿಲ್ಲ. ಇಂದು ಕಾಲ ಬದಲಾಗಿದೆ. ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆಯ ಫಲವಾಗಿ ಬಡವರಿಗೂ ಅಕ್ಕಿ ಸಿಗುತ್ತಿದೆ ಎಂದು ಶಾಸಕ ಬಿ.ಜಿ.ಗೊವಿಂದಪ್ಪ ರೈತರೊಂದಿಗಿನ ಸಂವಾದದ‌ ವೇಳೆ ಹೇಳಿದರು.

ಪೌಷ್ಠಿಕ ಆಹಾರ ಎನಿಸಿದ ಸಿರಿಧಾನ್ಯಗಳು ನಮ್ಮ ಆಹಾರ ಪದ್ದತಿಯಿಂದ ದೂರವಾಗುತ್ತಿವೆ. ವೈದ್ಯಲೋಕ ಸಿರಿಧಾನ್ಯಗಳ ಮಹತ್ವನ್ನು ಸಾಬೀತು ಮಾಡಿದೆ. ಇದರಿಂದಾಗಿ ಶ್ರೀಮಂತರು ಸಹ ಸಿರಿಧಾನ್ಯಗಳ ಆಹಾರ ಸೇವಿಸುತ್ತಿದ್ದಾರೆ. ಸಿರಿಧಾನ್ಯಗಳಿಗೆ ಉತ್ತಮ ಮಾರುಕಟ್ಟೆ ದೊರಕಿದರೆ ಹೆಚ್ಚು ರೈತರು ಸಿರಿಧಾನ್ಯ ಕೃಷಿ ಕಡೆಗೆ ಮುಖ ಮಾಡುವರು. ಹೊಸದುರ್ಗ ತಾಲ್ಲೂಕು ಮೊದಲಿನಿಂದಲೂ ಸಿರಿಧಾನ್ಯ ಕೃಷಿ ಹೆಸರಾಗಿದೆ. ಸದ್ಯ ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ಪಡಿತರ ವಿತರಣೆಯಲ್ಲಿ ಸ್ಥಳೀಯವಾಗಿ ಬೆಳೆಯುವ ಸಿರಿಧಾನ್ಯಗಳನ್ನು ಸರ್ಕಾರ ಖರೀದಿಸಿ, ಜನರಿಗೆ ವಿತರಿಸಬೇಕು ಎಂದು ಶಾಸಕ ಬಿ‌.ಜಿ.ಗೋವಿಂದಪ್ಪ ಸಚಿವರಲ್ಲಿ ಮನವಿ ಮಾಡಿದರು.

ಈ ವೇಳೆ ಶಾಸಕ ಟಿ.ರಘುಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಸೇರಿದಂತೆ ಸ್ಥಳೀಯ ಮುಖಂಡರು, ರೈತರು ಅಧಿಕಾರಿಗಳು ಉಪಸ್ಥಿತರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...