ಮಂಗಳೂರು: ಬೀದರ್ ಜಿಲ್ಲೆಯಲ್ಲಿ ಹಾಡ ಹಗಲೇ ಎಟಿಎಂ ದರೋಡೆ ಮಾಡಿದ ಘಟನೆ ತನಿಖೆಯಾಗುತ್ತಿದೆ. ಇದರ ಬೆನ್ನಲ್ಲೇ ಮಂಗಳೂರಿನಲ್ಲೂ ಅಂಥದ್ದೇ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲದಲ್ಲಿ ದರೋಡೆ ಮಾಡಿದ್ದಾರೆ. ಉಳ್ಳಾಲ ತಾಲೂಕಿನ ಕೆಸಿ ರೋಡ್ ನ ಕೋಟೆಕಾರು ಬ್ಯಾಂಕ್ ನಲ್ಲಿ ಈ ಘಟನೆ ನಡೆದಿದೆ.
ಐವರು ಮುಸುಕುಧಾರಿಗಳು ಕೋಟೆಕಾರು ಬ್ಯಾಂಕ್ ಗೆ ಬಂದೂಕು ಹಿಡಿದು, ಮುಸುಕು ಧರಿಸಿ ನುಗ್ಗಿದ್ದಾರೆ. ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ, ಚಿನ್ನಾಭರಣ, ನಗದನ್ನು ತೆಗೆದುಕೊಂಡು ಹೋಗಿದ್ದಾರೆ. ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ ಈ ಕೃತ್ಯ ಎಸಗಿದ್ದಾರೆ. ಹೆದರಿಕೊಂಡು ಬ್ಯಾಂಕ್ ನಲ್ಲಿದ್ದ ಹಣವನ್ನೆಲ್ಲ ಕೊಟ್ಟಿದ್ದಾರೆ. ಪೊಲೀಸರೆಲ್ಲಾ ಸಿಎಂ ಭದ್ರತೆಗೆ ತೆರಳಿದ್ದನ್ನು ನೋಡಿಕೊಂಡು ದರೋಡೆಕೋರರು ಈ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಟೈಟ್ ಸೆಕ್ಯುರಿಟಿ ಒದಗಿಸಲಾಗಿದೆ. ಆದ ಕಾರಣ ಹೆಚ್ಚಿನ ಪೊಲೀಸರು ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ತೆರಳಿರುವುದನ್ನೇ ಟಾರ್ಗೆಟ್ ಮಾಡಿಕೊಂಡ ದರೋಡೆಕೋರರು ಇದೀಗ ಬ್ಯಾಂಕ್ ಗೆ ಕನ್ನ ಹಾಕಿದ್ದಾರೆ. ಸದ್ಯ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಬಂದಿದ್ದು, ಶ್ವಾನ ದಳದ ಸಿಬ್ಬಂದಿ ಕೂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಕೂಡ ಬ್ಯಾಂಕ್ ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಯುಟಿ ಖಾದರ್, ಕೇಟೆಕಾರು ಬ್ಯಾಂಕ್ ನಲ್ಲಿ ಚಿನ್ನಾಭರಣ, ನಗದು ದರೋಡೆಯಾಗಿದೆ. ತಲ್ವಾರ್, ಗನ ತೋರಿಸಿ ಈ ಕೃತ್ಯ ಎಸಗಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















