ನವದೆಹಲಿ: ಪ್ತಧಾನಿ ನರೇಂದ್ರ ಮೋದಿಯವ ನೇತೃತ್ವದ 3.0 ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೇಂದ್ರ ಬಜೆಟ್ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಇದು ಮೂರನೇ ಬಾರಿ ಅಧಿಕಾರಕ್ಕೆ ಬಂದ ಮೇಲೆ ಘೋಷಣೆಯಾದ ಮೊದಲ ಬಜೆಟ್ ಆಗಿದೆ. ಕೇಂದ್ರ ಬಜೆಟ್ 2025-26 ಮಂಡನೆಯನ್ನು ಜನವರಿ 31ಕ್ಕೆ ನಿಗದಿ ಮಾಡಲಾಗಿದೆ. ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಾಗುತ್ತದೆ. ಫೆಬ್ರವರಿ 1 ರಂದು ಕೇಂದ್ರ ಹಣಕಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತರಾಮನ್ ಕೇಂದ್ರ ಬಜೆಟ್ 2025-26 ಅನ್ನು ಮಂಡನೆ ಮಾಡಲಿದ್ದಾರೆ.
ಬಜೆಟ್ ಮಂಡನೆಯ ವೇಳಾ ಪಟ್ಟಿಯನ್ನು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದೆ. ಬಜೆಟ್ ಅಧಿವೇಶನದ ಮೊದಲ ಹಂತದ ಕಲಾಪವೂ ಫೆಬ್ರವರಿ 13ರ ತನಕವೂ ನಡೆಯಲಿದೆ. ಮಾರ್ಚ್ 10ರಿಂದ ಏಪ್ರಿಲ್ 4ರ ತನಕ ಎರಡನೇ ಹಂತದ ಕಲಾಪವೂ ನಡೆಯಲಿದೆ. ಕೇಂದ್ರ ಬಜೆಟ್ 2025-26ಕ್ಕೆ ಸಂಬಂಧಿಸಿದಂತೆ ಸಚುವೆ ನಿರ್ಮಲಾ ಸೀತರಾಮನ್ ವಿವುಧ ವಲಯಗಳ ಜನಪ್ರತಿನಿಧಿಗಳೊಂದಿಗೆ ಬಜೆಟ್ ಪೂರ್ವ ಸಮಾಲೋಚನೆಯ ಸಭೆಯನ್ನು ನಡೆಸಲಿದ್ದಾರೆ. ವಿವಿಧ ವಲಯಗಳ ನಿರೀಕ್ಷೆಯನ್ನು ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸುತ್ತಾರೆ.
ಹಣಕಾಸು ಬಹೆಟ್ ಜೊತೆಗೆ ರೈಲ್ವೆ ಬಜೆಟ್ ಕೂಡ ಸೇರಿಸಲಾಗಿದೆ. ಈ ಮೂಲಕ ಸಾಮಾನ್ಯ ಬಜೆಟ್ ನಲ್ಲಿಯೇ ರೈಲ್ವೆ ಇಲಾಖೆಯ ಮಹತ್ವದ ಘೋಷಣೆಗಳು ಸೇರಿಲಿವೆ. ಉಳಿದಂತೆ ಮೂಲ ಸೌಕರ್ಯ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನಿರೀಕ್ಷೆ ಮಾಡಲಾಗುತ್ತಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










