Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಡಾ ಹಗರಣದಲ್ಲಿ ಇಡಿಯಿಂದ ಆಸ್ತಿ ಜಪ್ತಿ : ಸಿದ್ದರಾಮಯ್ಯ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು..?

---Advertisement---

ಬೆಳಗಾವಿ: ಮೂಡಾ ಹಗರಣದ ತನಿಖೆ ಇನ್ನು ನಡೆಯುತ್ತಲೆ ಇದೆ. ನಿನ್ನೆಯಷ್ಟೇ 300 ಕೋಟಿಯಷ್ಟು ಆಸ್ತಿಯನ್ನ ಜಪ್ತಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪಾತ್ರವಿದೆ ಎಂಬುದನ್ನು ನಿರೂಪಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರುಸಿಎಂ ಸ್ಥಾನಕ್ಕೆ ಈಗಲಾದರೂ ರಾಜೀನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಮೂಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲಗಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ ಎಂದಿದ್ದಾರೆ.

ಮೂಡಾ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎಂದು ಇಡಿ ಸಂಸ್ಥೆಯ ತನಿಖೆ ಒಂದು ಪ್ರಕರಣ ಎಂದರೆ ಅದರ ತನಿಖೆ ಸುಧೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂಬುದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವೂ ನಾನು ವಿಚಾರಣೆ ಮಾಡುವಂತಹದ್ದಲ್ಲ. ನಾನು ಇಡಿ ತನಿಖೆಯನ್ನು ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನು ಹೇಳುವುದಿಲ್ಲ. ಸುವರ್ಣ ಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜೊತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗುತ್ತದೆ ಎಂದಿದ್ದಾರೆ.

ಮಹಾದಾಯಿ ಬಗ್ಗೆ ಮಾತನಾಡಿ, ಇದರ ಬಗ್ಗೆ ಕಳೆದ ಹತ್ತು ದಿನಗಳ ಹಿಂದೆ ದೆಹಲಿಯಲ್ಲಿ ಸಭೆ ನಡೆದಿತ್ತು. ನಾನು ಹಾಗೂ ಹೆಚ್ ಕೆ ಪಾಟೀಲ್ ಅವರು ಇದೇ ವಿಚಾರವಾಗಿ ಇಂದು ಅರ್ಧ ಗಂಟೆ ಚರ್ಚೆ ಮಾಡಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ಪ್ರಧಾನಿಗಳನ್ನು ಭೇಟಿ ಮಾಡಿ ಈ ವಿಚಾರ ಪ್ರಸ್ತಾಪ ಮಾಡಿದಾಗ ಕೇಂದ್ರ ಜಲಶಕ್ತಿ ಸಚಿವರಿಗೆ ಈ ವಿಚಾರವನ್ನು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment