Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಮಹಾಯೋಗಿ ವೇಮನ ಜಯಂತಿ

---Advertisement---

ಚಿತ್ರದುರ್ಗ. ಜ.18:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಇದೇ ಜ.19ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ “ಮಹಾಯೋಗಿ ವೇಮನ ಜಯಂತಿ ಆಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

 

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ ಕಾರಜೋಳ, ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಭಾಗವಹಿಸುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್.ರಾಘವೇಂದ್ರ ಭಾಗವಹಿಸುವರು. ಚಳ್ಳಕೆರೆ ತಾಲ್ಲೂಕು ಬೇಡರೆಡ್ಡಿಹಳ್ಳಿ ಜಿ.ವಿ.ಆಂಜನಪ್ಪ ಸ್ಮಾರಕ ಸಂಯುಕ್ತ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಬಿ.ಭೀಮರೆಡ್ಡಿ ಉಪನ್ಯಾಸ ನೀಡುವರು. ಹಿಮಂತರಾಜ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.

ಜ.20ರಂದು ಪೂರ್ವಭಾವಿ ಸಭೆ : 

ಚಿತ್ರದುರ್ಗ.ಜ.18:
ಜಿಲ್ಲಾ ಕೇಂದ್ರದಲ್ಲಿ ಮಹನೀಯರ ಜಯಂತಿ ಆಚರಣೆ ಸಂಬಂಧ ಇದೇ ಜ.20ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ  ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.

ಫೆ.01ರಂದು ಮಡಿವಾಳ ಮಾಚಿದೇವ ಜಯಂತಿ ಆಚರಿಸುವ ಕುರಿತಂತೆ ಜ.20ರಂದು ಬೆಳಿಗ್ಗೆ 11ಕ್ಕೆ ಪೂರ್ವಭಾವಿ ಸಭೆ ಹಾಗೂ ಫೆ.05ರಂದು ಸವಿತಾ ಮಹರ್ಷಿ ಜಯಂತಿ ಆಚರಿಸುವ ಸಂಬಂಧ ಜ.20ರಂದು ಬೆಳಿಗ್ಗೆ 11.15ಕ್ಕೆ ಪೂರ್ವಭಾವಿ ಸಭೆ ನಡೆಯಲದೆ. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸುವರು.

ಸಮುದಾಯದ ಮುಖಂಡರು, ಸಾರ್ವಜನಿಕರು, ಜಿಲ್ಲಾ  ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಿ ಸಲಹೆ ಸೂಚನೆ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಕೋರಿದ್ದಾರೆ.

ಜ.21ರಂದು ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಇದೇ ಜ.21ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ “ನಿಜಶರಣ  ಶ್ರೀ ಅಂಬಿಗರ ಚೌಡಯ್ಯ” ಆಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ ಕಾರಜೋಳ, ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಭಾಗವಹಿಸುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್.ರಾಘವೇಂದ್ರ, ಜಿಲ್ಲಾ ಗಂಗಾಂಭಿಕಾ ಬೆಸ್ತರ ಸಂಘದ ಅಧ್ಯಕ್ಷ ಹೆಚ್.ಡಿ.ರಂಗಯ್ಯ, ಕಾರ್ಯದರ್ಶಿ ಪಿ.ಶ್ರೀನಿವಾಸ್ ಭಾಗವಹಿಸುವರು. ಹಿರಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಡಾ.ಎಸ್.ಮಾರುತಿ ಉಪನ್ಯಾಸ ನೀಡುವರು. ಚಳ್ಳಕೆರೆ ತಾಲ್ಲೂಕು ಮಲ್ಲೂರಹಳ್ಳಿಯ ರಾಜಣ್ಣ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...