Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾನೂನು ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ಸುಪ್ರೀಂಕೋರ್ಟ್ ನಲ್ಲಿ ಕೆಲಸಕ್ಕೆ ಅವಕಾಶ..!

---Advertisement---

ವಕೀಲರಾಗಬೇಕೆಂದು ಬಯಸುವ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಕಡೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಕಾನೂನು ಪದವಿ ಮಾಡಿರುವ ವಿದ್ಯಾರ್ಥಿಗಳು ಹಾಗೂ ಫೈನಲ್ ಇಯರ್ ನಲ್ಲಿರುವ ವಿದ್ಯಾರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ಸ್ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ.

ಅರ್ಜಿ ಸಲ್ಲಿಕೆಗೆ ಈಗಾಗಲೇ ಸಮಯ ಶುರುವಾಗಿದ್ದು, ದೇಶದ ಯಾವುದೇ ಮೂಲೆಯಲಿದ್ದರು ಅರ್ಜಿ ಸಲ್ಲಿಕೆ ಮಾಡಬಹುದು. ಇದಿ ಸಂಪೂರ್ಣವಾಗಿ ಅನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ. ಇದಕ್ಕೆ ಪರೀಕ್ಷೆಯೂ ಇದ್ದು, ದೇಶದ ವಿವಿಧ ಮೂಲೆಗಳಲ್ಲಿ ನಡೆಸಲಾಗುತ್ತದೆ. ಬೆಂಗಳೂರು ಕೂಡ ಸೇರ್ಪಡೆಯಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೂ ಪರೀಕ್ಷೆ ನಡೆಯುತ್ತದೆ. ಹೀಗಾಗಿ ಬೆಂಗಳೂರು ಸುತ್ತಮುತ್ತಲಿನ ಅಭ್ಯರ್ಥಿಗಳ ಸುಲಭವಾಗಲಿದೆ‌.

http://www.sci.gov.in ವೆಬ್ಸೈಟ್ ನಲ್ಲಿ ಎಲ್ಲಾ ಮಾಹಿತಿ ಸಿಗಲಿದೆ. ಒಮ್ಮೆ ಪರಿಶೀಲಿಸಿ, ಅಲ್ಲಿಯೇ ಅಪ್ಲೈ ಮಾಡಿ. ಕಾನೂನು ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ಸ್ ಹುದ್ದೆಗೆ ಅರ್ಜಿ ಕರೆಯಲಾಗಿದ್ದು, 90 ಪೋಸ್ಟ್ ಗಳು ಖಾಲಿ ಇದಾವೆ. ಭಾರತದ ಯಾವುದೇ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರುವವರು ಹಾಗೂ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. 20-32ರವರೆಗೂ ವಯಸ್ಸಿನ ಮಿತಿಯನ್ನು ನಿಗದಿ ಮಾಡಲಾಗಿದೆ. ಇನ್ನು SC/ST, EWS, OBC ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕವಿರಲಿದೆ. ಸ್ಕ್ರೀನಿಂಗ್ ಟೆಸ್ಟ್, ವಿಷಯಾಧಾರಿತ ಪರೀಕ್ಷೆ, ಸಂದರ್ಶನ, ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಮಾರ್ಚ್ 9ಕ್ಕೆ ಪರೀಕ್ಷೆ ನಡೆಯಲಿದೆ. ಫೆಬ್ರವರಿ7 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment