Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಂದ ಅಕ್ಕ ಕೆಫೆ ಉದ್ಘಾಟನೆ

---Advertisement---

ದಾವಣಗೆರೆ ಜ.20 :  ಮಹಿಳೆಯರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಜೀವನ ರೂಪಿಸಿಕೊಳ್ಳಬೇಕು, ಅವರ ಸ್ವಾವಲಂಬಿ ಬದುಕಿಗೆ ಅಕ್ಕ ಕೆಫೆಯು ಸಹಕಾರಿಯಾಗಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದರು.

 

ಅವರು ಸೋಮವಾರ ಪಶು ವೈದ್ಯಕೀಯ ಇಲಾಖೆ ಮುಂಭಾಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಹಭಾಗಿತ್ವದಲ್ಲಿ ಮಹಿಳಾ ಸ್ವ-ಸಹಾಯ ಸಂಘದವರು ನಿರ್ವಹಣೆ ಮಾಡುವ ಅಕ್ಕ ಕೆಫೆ ಉದ್ಘಾಟಿಸಿ ಮಾತನಾಡಿದರು.
ಅಕ್ಕ ಕೆಫೆಯನ್ನು ಸ್ವಸಹಾಯ ಗುಂಪಿಗೆ ಸೇರಿದ 14 ಮಹಿಳೆಯರು ನಡೆಸುವರು. ಬೆಳಗ್ಗೆ 6 ರಿಂದ ರಾತ್ರಿ 10 ರ ವರೆಗೆ ವಾರವಿಡಿ ಕಾರ್ಯನಿರ್ವಹಿಸಲಿದೆ. ಇಲ್ಲಿ ಆರೋಗ್ಯಕರ, ಮನೆರುಚಿಯ ಸ್ವಾದಿಷ್ಟ ಆಹಾರ ಲಭ್ಯವಿರಲಿದೆ. ಶುಚಿ-ರುಚಿ ಜತೆಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ಆಹಾರ ಪೂರೈಕೆಯಾಗಲಿದೆ ಎಂದರು.

ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...