Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಂಗಳೂರು ದರೋಡೆ ಕೇಸ್ : ಮೂವರ ಬಂಧನ : ಮುಂಬೈ ಮೂಲದ ಲಿಂಕ್..!

---Advertisement---

 

ಮಂಗಳೂರು: ಬೀದರ್ ನಲ್ಲಿ ಹಾಡಹಗಲೇ ದರೋಡೆ ನಡೆದ ಬೆನ್ನಲ್ಲೇ ಮಂಗಳೂರಿನ ಕೋಟೆಕಾರು ಬ್ಯಾಂಕ್ ನಲ್ಲೂ ದರೋಡೆ ನಡೆದಿತ್ರು. ಇದೀಗ ಮಂಗಳೂರು ಪೊಲೀಸರು ದರೋಡೆಕೋರರನ್ನು ಅರೆಸ್ಟ್ ಮಾಡಿದ್ದಾರೆ. ಅವರಿಂದ ಚೀಲಗಳು, ಕಾರು, ಶಸ್ತ್ರಾಸ್ತ್ರಗಳನ್ನ ವಶಕ್ಕೆ ಪಡೆದಿದ್ದಾರೆ. ಮೂವರು ದರೋಡೆಕೋರರಿಗೂ ಮುಂಬೈ ಮೂಲದ ಲಿಂಕ್ ಇದೆ ಎಂಬುದು ತಿಳಿದು ಬಂದಿದೆ ಎನ್ನಲಾಗಿದೆ.

ದರೋಡೆ ಮಾಡಿದ್ದ ಆರೋಪಿಗಳು ದರೋಡೆಯ ಬಳಿಕ ತಲೆಮರೆಸಿಕೊಂಡಿದ್ದರು. ಆದರೆ ಮಂಗಳೂರು ಪೊಲೀಸರು ಅವರನ್ನ ಪತ್ತೆ ಹಚ್ಚಿದ್ದಾರೆ. ಆರೋಪಿಗಳ ಬೆನ್ನು ಹತ್ತಿದ್ದ ಪೊಲೀಸರು ಮಧುರೈ ಬಳಿ ಅರೆಸ್ಟ್ ಮಾಡಿದ್ದಾರೆ. ತಿರುನಲ್ವೇಲಿಗೆ ಆರೋಪಿಗಳು ಎಸ್ಕೇಪ್ ಆಗಲೂ ಪ್ರಯತ್ನಿಸಿದ್ದರು. ಮುರುಗನ್, ಪ್ರಕಾಶ್, ಮಣಿವಣ್ಣನ್ ಅರೆಸ್ಟ್ ಆದಂತ ಆರೋಪಿಗಳು.

 

ಬಂಧಿತ ಆರೋಪಿಗಳ ಬಳಿ ಹಣ ತುಂಬಿಕೊಂಡು ಹೋಗಿದ್ದ ಎರಡು ಗೋಣಿ ಚೀಲಗಳು, ಎರಡು ಪಿಸ್ತೂಲ್, ತಲ್ವಾರ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಜೊತೆಗೆ ಆರೋಪಿಗಳ ಬಳಿ ಇದ್ದ ಫಿಯೆಟ್ ಕಾರನ್ನು ವಶಕ್ಕೆ ಪಡೆದಿದ್ದಾರೆ. ದರೋಡೆಕೋರರಿಗೆ ಮುಂಬೈ ಮೂಲದ ಲಿಂಕ್ ಇದೆ ಎಂಬುದು ತಿಳಿದು ಬಂದಿದೆ. ಮಂಗಳೂರಿನ ಕೋಟೆಕಾರು ಉಲ್ಲಾಳದ ಸಹಕಾರಿ ಬ್ಯಾಂಕಿಗೆ ನುಗ್ಗಿದ ದರೋಡೆಕೋರರು ಸಿನಿಮೀಯ ರೀತಿಯಲ್ಲಿ ಅಲ್ಲಿ ಕೋಟಿಗಟ್ಟಲೆ ಹಣ ದೋಚಿ ಪರಾರಿಯಾಗಿದ್ದರು. ಕಾರಿನಲ್ಲಿ ಬಂದಿದ್ದ ಆರೋಪಿಗಳು ಬ್ಯಾಂಕ್ ಒಳಗೆ ನುಗ್ಗಿ, ದರೋಡೆ ಮಾಡಿಕೊಂಡು ಎಸ್ಕೇಪ್ ಆಗಿದ್ದರು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕೂಡ ಮಂಗಳೂರು ಪೊಲೀಸ್ ಕಮಿಷನರ್ ಅವರ ಜೊತೆಗೆ ತುರ್ತು ಸಭೆ ನಡೆಸಿ, ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚಲು ಸೂಚಿಸಿದ್ದರು. ಇದೀಗ ಅದರಂತೆ ಆರೋಪಿಗಳನ್ನ ಬಂಧಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment