ಸುದ್ದಿಒನ್, ಚಿತ್ರದುರ್ಗ, ಜನವರಿ. 21 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ತುಮಕೂರಿನಲ್ಲಿ ನಡೆದ 39 ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ZEE ಕನ್ನಡ ನ್ಯೂಸ್ ಜಿಲ್ಲಾ ವರದಿಗಾರರು ಹಾಗೂ
ಈ ನಗರವಾಣಿ ಸಂಪಾದಕರಾದ ಮಾಲತೇಶ್ ಅರಸ್ ಅವರಿಗೆ KUWJ ವಾರ್ಷಿಕ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನಸಭಾ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು, ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಸಚಿವರು, ಶಾಸಕರು ಮತ್ತು ಅನೇಕ ಜನಪ್ರತಿನಿಧಿಗಳು KUWJ ಪದಾಧಿಕಾರಿಗಳಿಗೆ ಉಪಸ್ಥಿತರಿದ್ದರು.
ಮಾಧ್ಯಮ ಕ್ಷೇತ್ರ ಸಲ್ಲಿಸಿರುವ ಮೌಲಿಕವಾದ ಸೇವೆಯನ್ನು ಗುರುತಿಸಿ ಗ್ರಾಮೀಣ ಭಾಗದ ವರದಿಗೆ ಕೊಡಮಾಡುವ ಅಭಿಮಾನಿ ಪ್ರಕಾಶನ ಪ್ರಶಸ್ತಿ ಇದಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















