ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಜ.21: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜ.23 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಜಕ್ಕೂರು ಏರೋಡ್ರೋಂ ನಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸುವ ಅವರು, ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿ.ವಿ.ಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ಗೆ ಆಗಮಿಸುವರು.
ವಾಣಿ ವಿಲಾಸ ಸಾಗರ ಜಲಾಶಯವು ಭರ್ತಿಯಾದ ಹಿನ್ನಲೆಯಲ್ಲಿ ಗಂಗಾಪೂಜೆ ಮತ್ತು ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸಂಜೆ 5 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.
ಜ.23 ರಂದು ವಾಣಿವಿಲಾಸ ಸಾಗರ ಜಲಾಯಶಕ್ಕೆ ಬಾಗಿನ ಸಮರ್ಪಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿ

ಹಿರಿಯೂರು ತಾಲ್ಲೂಕಿನಲ್ಲಿರುವ ವಾಣಿವಿಲಾಸ ಸಾಗರ ಜಲಾಶಯವು 3ನೇ ಬಾರಿ ಭರ್ತಿಯಾಗಿದೆ. ಜಿಲ್ಲೆಯ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಈ ಶುಭ ಸಂದರ್ಭದಲ್ಲಿ ಜ.23 ರಂದು ಜಲಸಂಪನ್ಮೂಲ ಇಲಾಖೆಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಗಂಗಾಪೂಜೆ ಮತ್ತು ಬಾಗಿನ ಸಮರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಮಧ್ಯಾಹ್ನ 3 ಗಂಟೆಗೆ ವಿ.ವಿ.ಪುರ ಗ್ರಾಮದ ವಾಣಿವಿಲಾಸ ಸಾಗರ ಜಲಾಶಯದ ಬಳಿ ಜರಗುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗಂಗಾಪೂಜೆ ನೆರವೇರಿಸಿ, ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಟಿ.ರಘುಮೂರ್ತಿ, ಶಾಸಕರುಗಳಾದ ಎನ್.ವೈ.ಗೋಪಾಲಕೃಷ್ಣ, ಎಂ.ಚAದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯರುಗಳಾದ ಚಿದಾನಂದ ಎಂ. ಗೌಡ, ಡಿ.ಟಿ.ಶ್ರೀನಿವಾಸ್, ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ವಿ.ವಿ.ಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಟಿ.ಗಂಗಮ್ಮ ಉಮೇಶ್, ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷಿö್ಮದೇವಿ ಮದ್ದಣ್ಣ.ಆರ್ ಸೇರಿದಂತೆ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಪಾಲ್ಗೊಳ್ಳುವರು.
ಜನಸಂಪನ್ಮೂಲ ಇಲಾಖೆ ಸರ್ಕಾರ ಕಾರ್ಯದರ್ಶಿ ಗೌರವ್ ಗುಪ್ತ, ಕಾರ್ಯದರ್ಶಿ ಕೃಷ್ಣಮೂರ್ತಿ.ಬಿ.ಕುಲಕರ್ಣಿ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿ.ಪಂ.ಸಿಇಓ ಸೋಮಶೇಖರ್.ಎಸ್.ಜೆ, ಭದ್ರಾ ಮೇಲ್ದಂಡೆ ಚಿತ್ರದುರ್ಗ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಎಫ್.ಹೆಚ್.ಲಮಾಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್