Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಯುಷ್ ವೈದ್ಯಾಧಿಕಾರಿಗಳಿಗೆ ನಿ-ಕ್ಷಯ ಕಾರ್ಯಗಾರ

---Advertisement---

ಚಿತ್ರದುರ್ಗ. ಜ.22: ಕ್ಷಯಮುಕ್ತ ಅಭಿಯಾನದ ಅಂಗವಾಗಿ ಆಯುಷ್ ಇಲಾಖೆ ವತಿಯಿಂದ ಜಿಲ್ಲೆಯ ಆಯುಷ್ ವೈದ್ಯಾಧಿಕಾರಿಗಳಿಗೆ ಸೋಮವಾರ ಜಿಲ್ಲಾ ಆಯುಷ್ ಕಚೇರಿಯಲ್ಲಿ ನಿ-ಕ್ಷಯ ಕಾರ್ಯಗಾರ ಹಮ್ಮಿಕೊಳ್ಳಾಗಿತ್ತು.

ಜಿಲ್ಲಾಕ್ಷಯ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ ಡಾ.ಪ್ರಶಾಂತ್ ಮಾತನಾಡಿ, ಆಯುಷ್ ವೈದ್ಯಾಧಿಕಾರಿಗಳಿಗೆ ಕ್ಷಯರೋಗ ಪತ್ತೆ ಹೆಚ್ಚುವಿಕೆ ಹಾಗೂ ರೋಗದ ಚಿಕಿತ್ಸಾ ವಿಧಾನವನ್ನು ತಿಳಿಸಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಶ್ರೀನಂದನ್ 100 ದಿನಗಳ ನಿ-ಕ್ಷಯ ಅಭಿಯಾನವಾಗಿದ ಅಂಗವಾಗಿ ಹಮ್ಮಿಕೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳನ್ನು ವಿವರಿಸಿದರು.

ಇದರೊಂದಿಗೆ ಆಯುಷ್ ವೈದ್ಯಾಧಿಕಾರಿಗಳು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಹೆಚ್ಚು ರೋಗಿಗಳನ್ನು ಪತ್ತೆಹಚ್ಚಿ ಹತ್ತಿರದ ಕ್ಷಯ ನಿರ್ಮೂಲನ ಕೇಂದ್ರಗಳಿಗೆ ಕಳಿಸುವುದರ ಮೂಲಕ, ಟಿಬಿಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಕೋರಿದರು.

ಮಧ್ಯಾಹ್ನ ಜರುಗಿದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಖಾಸಗಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರು, ಖಾಸಗಿ ವೈದ್ಯರ ಸಂಘದ ಪದಾಧಿಕಾರಿಗಳು, ಎನ್.ಐ.ಎಂ.ಎ, ಎಎಫ್‌ಐ, ಸಂಘದ ಪದಾಧಿಕಾರಿಗಳು ಜಿಲ್ಲೆಯ ಸಂಚಾಲಕರು ಮತ್ತು ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರೊಂದಿಗೆ ಅಭಿಯಾನದ ಯಶಸ್ವಿಗೆ ಸಂಬAಧಿಸಿದAತೆ ಸಭೆಯನ್ನು ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್.ಎಸ್.ನಾಗಸಮುದ್ರ ಮಾತನಾಡಿ, ಜನವರಿ 28 ರಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನೆ ಹಾಗೂ 30ನೇ ತಾರೀಕು ಸಾರ್ವಜನಿಕರಿಗೆ ಅರಿವನ್ನು ಮೂಡಿಸಲು ಚಿತ್ರದುರ್ಗದ ಪ್ರಮುಖ ಬೀದಿಗಳಲ್ಲಿ ಜಾಥಾವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಭಾರತವನ್ನು ಕ್ಷಯಮುಕ್ತವಾಗಿಸಲು ವಿವಿಧ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರ ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಯಕ್ರಮ ಯಶಸ್ವಿಯಾಗಲು ಸಮಿತಿಯನ್ನು ರಚಿಸಿದ್ದು, ಡಾ.ಪ್ರಶಾಂತ ಜಿಲ್ಲಾ ಸಂಚಾಲಕರಾಗಿ ಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ಅಮೃತ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಪ್ರಾಂಶುಪಾಲ ಡಾ.ಪ್ರಶಾಂತ, ಪ್ರ‍್ರಕೃತಿ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಪ್ರಾಂಶುಪಾಲ ಡಾ.ನವಾಜ್, ಖಾಸಗಿ ವೈದ್ಯರ ಸಂಘದ ಪದಾಧಿಕಾರಿ ಡಾ. ರಾಮರಾಜ್, ಜಿಲ್ಲಾ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾದ ಡಾ.ಮಂಜುಳಾ, ಜಿಲ್ಲಾ ನಿ-ಕ್ಷಯ ವೈದ್ಯಾಧಿಕಾರಿಗಳಾದ ಡಾ.ನಾಗರಾಜ್ ಶಿವಕುಮಾರ್ ಹಾಜರಿದ್ದರು.

ಕಾರ್ಯಾಗಾರದಲ್ಲಿ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಚಂದ್ರಕಾಂತ್, .ಎಸ್.ನಾಗಸಮುದ್ರ ನಿ-ಕ್ಷಯ ಅಭಿಯಾನದ ಭಿತ್ತಿಪತ್ರ ಬಿಡುಗಡೆ ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...