Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

5 ಕೋಟಿ ರೂ ವೆಚ್ಚದಲ್ಲಿ ಅರಸನಕೆರೆ ಅಭಿವೃದ್ಧಿ : ಉಪಲೋಕಾಯುಕ್ತರ ಭೇಟಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 23 : ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಗುರುವಾರ ಬೆಳಿಗ್ಗೆ ನಗರದ ಹೊರವಲಯದಲ್ಲಿನ ಮುರುಘಾಮಠ ಎದುರಿನ ಅರಸನಕೆರೆಗೆ ಭೇಟಿ ನೀಡಿ, ಅಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿ, ಸಮಗ್ರ ಮಾಹಿತಿ ಪಡೆದುಕೊಂಡರು.

ಐತಿಹಾಸಿಕ ಚಿತ್ರದುರ್ಗ ನಗರಕ್ಕೆ ಇದೊಂದು ಉತ್ತಮ ಕೆರೆಯನ್ನಾಗಿಸಲು ಸದಾವಕಾಶವಿದೆ,  ಇದನ್ನು ಒಳ್ಳೆಯ ಪ್ರವಾಸಿ ತಾಣವಾಗಿಸಬಹುದಾಗಿದೆ, ಕೆರೆಯ ಅಭಿವೃದ್ಧಿ ಕಾರ್ಯವನ್ನು ಗುಣಮಟ್ಟದಿಂದ, ಯೋಜನಾಬದ್ಧವಾಗಿ ಮಾಡಬೇಕು,  ಇಲ್ಲಿ ವಾಯುವಿಹಾರ ಮಾಡಲು ವಾಕಿಂಗ್ ಪಾಥ್ ನಿರ್ಮಿಸಬೇಕು.  ಅಭಿವೃದ್ಧಿ ಕಾಮಗಾರಿಯ ಸಮಗ್ರ ವಿವರವನ್ನು ಕಾಮಗಾರಿಯ ಸ್ಥಳದಲ್ಲಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಬೋರ್ಡ್ ಅಳವಡಿಸಿ ಪ್ರದರ್ಶಿಸಬೇಕು.  ಕೆರೆಗೆ ಯಾವುದೇ ಕಾರಣಕ್ಕೂ ನಗರದ ಚರಂಡಿ ನೀರು, ಕಲುಷಿತ ನೀರು ಸೇರ್ಪಡೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೋಮಶೇಖರ್ ಅವರು, ಪ್ರಾಧಿಕಾರದ ವತಿಯಿಂದ ಅರಸನಕೆರೆಯನ್ನು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಜೀವನ್ ಪ್ರಕಾಶ್ ಎಂಬುವ ಗುತ್ತಿಗೆದಾರರಿಗೆ ಕಾಮಗಾರಿಯನ್ನು ವಹಿಸಲಾಗಿದೆ, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಲೋಕಾಯುಕ್ತ ಅಪರ ನಿಬಂಧಕರಾದ ಪೃಥ್ವಿರಾಜ್ ವರ್ಣೇಕರ್ ಹಾಗೂ ಜಿ.ವಿ. ವಿಜಯಾನಂದ, ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಕಿರಣ್ ಪಿ. ಎಂ. ಪಾಟೀಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್, ಜಿಲ್ಲಾಧಿಕಾರಿ ವೆಂಕಟೇಶ್ ಟಿ, ಜಿ.ಪಂ. ಸಿಇಒ ಸೋಮಶೇಖರ್ ಎಸ್.ಜೆ., ಲೋಕಾಯುಕ್ತ ಅಧೀಕ್ಷಕ ವಾಸುದೇವರಾಮ, ಡಿವೈಎಸ್‍ಪಿ ಮೃತ್ಯುಂಜಯ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ನಗರಸಭೆ ಪೌರಾಯುಕ್ತೆ ರೇಣುಕಾ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment