Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಕ್ರಿಕೆಟರ್ ವಿರೇಂದ್ರ ಸೆಹ್ವಾಗ್ ಬಾಳಲ್ಲಿ ಡಿವೋರ್ಸ್ ಬಿರುಗಾಳಿ..!

---Advertisement---

ಇತ್ತೀಚೆಗಂತು ಕ್ರಿಕೆಟ್ ಅಂಗಳ ಹಾಗೂ ಬಾಲಿವುಡ್ ಅಂಗಳದಲ್ಲಿ ಸಿಕ್ಕಾಪಟ್ಟೆ ಡಿವೋರ್ಸ್ ಕೇಸ್ ಗಳು ಸದ್ದು ಮಾಡುತ್ತಿವೆ. ಇದೀಗ ಭಾರತೀಯ ಕ್ರಿಕೆಟ್ ದಂತಕಥೆ ವಿರೇಂದ್ರ ಸೆಹ್ವಾಗ್ ಡಿವೋರ್ಸ್ ವಿಚಾರ ಸದ್ದು ಮಾಡುತ್ತಿದೆ. 20 ವರ್ಷಗಳ ದಾಂಪತ್ಯ ಜೀವನದ ಬಳಿಲ ಸೆಹ್ವಾಗ್ ಹಾಗೂ ಆರತಿ ಅಹ್ಲಾವತ್ ಬೇರೆ ಬೇರೆ ಆಗ್ತಿದ್ದಾರೆ ಎನ್ನಲಾಗಿದೆ. ಇವರಿಬ್ಬರದ್ದು ಲವ್ ಮ್ಯಾರೇಜ್. ಇದೀಗ ಆ ಪ್ರೀತಿಯ ಬಂಧವನ್ನ ಬಿಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

 

2000ನೇ ಇಸವಿಯ ಆರಂಭದಲ್ಲಿ ಸೆಹ್ವಾಗ್ ಮತ್ತು ಆರತಿ ನಡುವೆ ಪ್ರೀತಿ-ಪ್ರೇಮ ಚಿಗುರೊಡೆದಿತ್ತು. ಮನೆಯವರನ್ನೆಲ್ಲ ಒಪ್ಪಿಸಿ ಅದ್ದೂರಿಯಾಗಿಯೇ ಇಬ್ಬರು ಮದುವೆಯಾದರು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. 2007ರಲ್ಲಿ ಹಿರಿಯ ಪುತ್ರ ಆರ್ಯವೀರ್ ಜನಿಸಿದ್ರೆ, 2010ರಲ್ಲಿ 2ನೇ ಪುತ್ರ ವೇದಾಂತ್ ಜನಿಸಿದ್ದ. ದೀರ್ಘ ಅವಧಿಯ ಕಾಲ ಜೊತೆಯಾಗಿಯೇ ಸಂಸಾರ ಮಾಡಿದ್ದರೂ ಇತ್ತೀಚಿನ ಬೆಳವಣಿಗೆಗಳಯ ಇವರಿಬ್ಬರ ನಡುವಿನ ಅಂತರ ದೊಡ್ಡಮಟ್ಟದಲ್ಲಿಯೇ ಹೆಚ್ಚಾಗಿದೆಯಂತೆ. ಹೀಗಾಗಿ ಡಿವೋರ್ಸ್ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ. ಆಪ್ತ ಮೂಲಗಳ ಪ್ರಕಾರ ಹಲವು ತಿಂಗಳಿನಿಂದ ಇಬ್ಬರು ಬೇರೆ ಬೇರೆಯಾಗಿಯೇ ವಾಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಒಂದು ಕಾಲದಲ್ಲಿ ಸೆಹ್ವಾಗ್ ಹಾಗೂ ಆರತಿ ಅವರನ್ನ ಪರ್ಫೆಕ್ಟ್ ಜೋಡಿ ಎಂದೇ ನೋಡಲಾಗುತ್ತಿತ್ತು. ಆದರೆ ಈಗ ಇಂಥದ್ದೊಂದು ಸುದ್ದಿ ಹರಿದಾಡುತ್ತಿದೆ. ಇಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ. ಇಬ್ಬರೂ ಅಧಿಕೃತವಾಗಿ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಆದರೆ ಆ ಲಕ್ಷಣಗಳು ಕಾಣಿಸುತ್ತಿವೆ. ಕಳೆದ ವತ್ಷದ ದೀಪಾವಳಿ ಸಂಭ್ರಮದಲ್ಲಿ ವಿರೇಂದ್ರ ಸೆಹ್ವಾಗ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನ ಹಂಚಿಕೊಂಡಿದ್ದರು. ಅದರಲ್ಲಿ ತಮ್ಮಿಬ್ಬರು ಮಕ್ಕಳು ಹಾಗೂ ತಾಯಿ‌ ಮಾತ್ರ ಇದ್ದರು. ಆದರೆ ಆರತಿ‌ ಎಲ್ಲಿಯೂ ಕಂಡಿರಲಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment