Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಕ್ರೋ ಫೈನಾನ್ಸ್ ಕಿರುಕುಳ : ಸಿಎಂ ಸಭೆಯಲ್ಲಿ ನಡೆದ ಚರ್ಚೆಯ ಕಂಪ್ಲೀಟ್ ಮಾಹಿತಿ ಇಲ್ಲಿದೆ

---Advertisement---

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಜನ ಬೇಸತ್ತು ಹೋಗಿದ್ದಾರೆ. ಇದನ್ನ ತಪ್ಪಿಸಲು ಸರ್ಕಾರ ಮಹತ್ವದ ನಿರ್ಧಾರ ಮಾಡಿದೆ. ಅದರ ಭಾಗವಾಗಿ ಇಂದು ನಡೆದ ಸಭೆಯಲ್ಲಿ ಹಲವು ತೀರ್ಮಾನಗಳನ್ನ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಯಾರೆಲ್ಲ ಭಾಗಿಯಾಗಿದ್ರು, ಏನೆಲ್ಲಾ ಚರ್ಚೆ ಆಯ್ತು ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎಸಿಎಸ್ ಅತೀಕ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಗೃಹ ಇಲಾಖೆ, ಒಳಾಡಳಿತ, ಕಂದಾಯ, ಗುಪ್ತಚರ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದಾರೆ.

ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ ಎಂದು ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಖಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದರು.

*ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?

*ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು?

*ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ?

*ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?

*RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?

*ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು

*ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.

*ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ?: ಆರ್ ಬಿ ಐ ಅಧಿಕಾರಿಗಳಿಗೆ ಪ್ರಶ್ನಿಸಿದ ಸಿಎಂ.

*ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿತಿನ ಚೀಟಿ ( ಐ ಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ: ಕಂಪನಿಗಳಿಗೆ ಕೇಳಿದ ಸಿಎಂ*

*ಆರ್ ಬಿ ಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎಂದು ಮೈಕ್ರೋ ಕಂಪನಿಯವರು ಉತ್ತರಿಸಿದ್ದಾರೆ.

ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ, ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ‌ ತಿಳಿಸಿದ್ದಾರೆ.

ಇದೆ ವೇಳೆ ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment