ಸುದ್ದಿಒನ್, ಚಿತ್ರದುರ್ಗ, ಜನವರಿ. 25 : ನಗರದ ಹೊರವಲಯದ ಪಿಳ್ಳೆಕೆರೇನಹಳ್ಳಿ ನಿವಾಸಿ ಶಿವಕುಮಾರ್ (26 ವರ್ಷ) ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾದರು.
ಮೃತರು ತಾಯಿ, ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಗ್ರಾಮದ ರುದ್ರಭೂಮಿಯಲ್ಲಿ ಮಧ್ಯಾನ್ಹ 3:30 ಕ್ಕೆ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.