ಮುಂಬಯಿ, (ಡಿ.04) : ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಸ್ಪಿನ್ನರ್ ಅಜಾಜ್ ಪಟೇಲ್ ಇನ್ನಿಂಗ್ಸ್‌ವೊಂದರಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಜಿಮ್ ಲೇಕರ್ ಮತ್ತು ಅನಿಲ್ ಕುಂಬ್ಳೆ ನಂತರ, ಅಜಾಜ್ ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಪಡೆದ ಏಕೈಕ ಮೂರನೇ ಬೌಲರ್ ಆದರು.
Only the third bowler to claim all 10 wickets in an innings in the history of Test cricket 🔥
Take a bow, Ajaz Patel! #WTC23 | #INDvNZ | https://t.co/EdvFj8QtKD pic.twitter.com/negtQkbeKd
— ICC (@ICC) December 4, 2021
ಟೆಸ್ಟ್ ಪಂದ್ಯವೊಂದರ ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅಜಾಜ್ ಪಟೇಲ್ ಭಾರತದ ಅನಿಲ್ ಕುಂಬ್ಳೆ ಮತ್ತು ಜಿಮ್ ಲೇಕರ್ ಅವರ ದಾಖಲೆಯನ್ನು ಸರಿಗಟ್ಟಿದರು. ಅಜಾಜ್‌ಗಿಂತ ಮೊದಲು, ಇಂಗ್ಲೆಂಡ್ ವೇಗಿ ಜಿಮ್ ಲೇಕರ್ 1956 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಪಡೆದಿದ್ದರು, ಮತ್ತು ಅನಿಲ್ ಕುಂಬ್ಳೆ 1999 ರಲ್ಲಿ ಪಾಕಿಸ್ತಾನದ ವಿರುದ್ಧ ಎಲ್ಲಾ 10 ವಿಕೆಟ್‌ಗಳನ್ನು ಪಡೆದಿದ್ದರು.
ಅಜಾಜ್ ಪಟೇಲ್ 21ನೇ ಶತಮಾನದಲ್ಲಿ 10 ವಿಕೆಟ್ ಪಡೆದ ಮೊದಲ ಕ್ರಿಕೆಟಿಗ. ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ, ಅಜಾಜ್ ಪಟೇಲ್ ಒಬ್ಬರೇ ಇನ್ನಿಂಗ್ಸ್‌ನಲ್ಲಿ 47 ಓವರ್‌ಗಳಿಗಿಂತ ಹೆಚ್ಚು ಬೌಲ್ ಮಾಡಿದರು, ಆದರೆ ಅವರ ಉಳಿದ ಸಹ ಆಟಗಾರರು 22 ಓವರ್‌ಗಳ ಗಡಿಯನ್ನು ದಾಟಲಿಲ್ಲ.
ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳ ದಾಖಲೆಯನ್ನು ಸರಿಗಟ್ಟುವುದರ ಜೊತೆಗೆ, ಅಜಾಜ್ ಪಟೇಲ್ ಇತರ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ಭಾರತದ ವಿರುದ್ಧ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ಗಳನ್ನು ಕಬಳಿಸಿದ ನಂತರ, ಅಜಾಜ್ ಪಟೇಲ್ ಪ್ರವಾಸಿ ಆಟಗಾರನ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಅವರಿಗಿಂತ ಮೊದಲು, ನಾಥನ್ ಲಿಯಾನ್ (8/50) ಮತ್ತು ಜೇಸನ್ ಕ್ರೆಜ್ಜಾ (8/215) ಪಟ್ಟಿಯಲ್ಲಿದ್ದಾರೆ.
ಅಷ್ಟೇ ಅಲ್ಲದೇ 1985 ರಲ್ಲಿ ಭಾರತದ ವಿರುದ್ಧ ಇನ್ನಿಂಗ್ಸ್‌ನಲ್ಲಿ 9 ವಿಕೆಟ್‌ಗಳನ್ನು ಪಡೆದ ರಿಚರ್ಡ್ ಹ್ಯಾಡ್ಲಿ ಅವರ ದಾಖಲೆಯನ್ನು ಮುರಿದು, ಭಾರತದಲ್ಲಿ ಭಾರತದ ವಿರುದ್ಧ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.