ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಕಡಿಮೆಯಾದಂತೆ ಕಾಣಿಸುತ್ತಿಲ್ಲ.ಮೈಕ್ರೋ ಫೈನಾನ್ಸ್ ಗಳ ಕಾಟದಿಂದ ಅದೆಷ್ಟೋ ಜನ ಜೀವ ಕಳೆದುಕೊಂಡಿದ್ದರು. ಇದೆಲ್ಲವನ್ನು ಗಮನಿಸಿದ್ದ ಕಾಂಗ್ರೆಸ್ ಸರ್ಕಾರ, ಮೈಕ್ರೋ ಫೈನಾನ್ಸ್ ಕಂಪನಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕುವುದಕ್ಕೆ ಪ್ರಯತ್ನಿಸಿತ್ತು. ಒಂದಷ್ಟು ಕಾನೂನು ಜಾರಿಗೆ ತರುವುದರ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿತ್ತು. ಆದರೂ ಮೈಕ್ರೋ ಫೈನಾನ್ಸ್ ಗಳ ಅಟ್ಟಹಾಸ ನಿಂತಿಲ್ಲ. ಇವರ ಉಪಟಳಕ್ಕೆ ಮತ್ತೊಂದು ಬಲಿಯಾಗಿದೆ.
ಮೈಸೂರಿನ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 53 ವರ್ಷದ ಜಯಶೀಲ ಆತ್ಮಹತ್ಯೆಗೆ ಶರಣಾದವರು. ಜಯಶೀಲ, ವ್ಯವಸಾಯ ಹಾಗೂ ಹಸು ಸಾಕಾಣಿಕೆ ಮಾಡುತ್ತಿದ್ದರು. ಆದರೆ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆ ಅಂತ ಐಐಎಫ್ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ನಲ್ಲಿ 5 ಲಕ್ಷ ಸಾಲ ಪಡೆದುಕೊಂಡಿದ್ದರು. ಇದಕ್ಕಾಗಿ ಪ್ರತಿ ತಿಂಗಳು 20 ಸಾವಿರ ರೂಪಾಯಿ ಕಂತುಗಳನ್ನು ಕಟ್ಟುತ್ತಿದ್ದರು.
ಬದುಕಿಗೆ, ಫೈನಾನ್ಸ್ ಸಾಲ ತೀರಿಸುವುದಕ್ಕಾಗಿಯೇ ನಂಬಿಕೊಂಡಿದ್ದ ಹಸು ಆಕಸ್ಮಿಕವಾಗಿ ಸಾವನ್ನಪ್ಪಿತ್ತು. ಇದರಿಂದ ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದ ಇಎಂಐ ಕಟ್ಟಲು ಸಹ ಆಗಿರಲಿಲ್ಲ. ಜೀವನ ನಿರ್ವಹಣೆ ಮಾಡುವುದಕ್ಕೂ ಈ ಮಹಿಳೆಗೆ ಸಂಕಷ್ಟವಾಗಿತ್ತು. ಹೀಗಾಗಿ ಮೈಕ್ರೋ ಫೈನಾನ್ಸ್ ಗೆ ಹೆದರಿ ಜಮೀನಿನಲ್ಲಿಯೇ ವಿಷದ ಮಾತ್ರೆಗಳನ್ನು ಸೇವಿಸಿದ್ದರು. ಜಯಶೀಲ ಒದ್ದಾಡುತ್ತಿದ್ದನ್ನು ಕಂಡ ಸ್ಥಳೀಯರು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಿದರು, ಅರ್ಧ ದಾರಿಯಲ್ಲಿಯೇ ಸಾವನ್ನಪ್ಪಿದರು. ಸ್ಥಳಕ್ಕೆ ಆಗಮಿಸಿದ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















